Advertisement

ಬೆಳೆ ಸಮೀಕ್ಷೆ ಯಶಸ್ವಿಗೆ ಸಹಕರಿಸಿ

02:50 PM Sep 14, 2020 | Suhan S |

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ರೈತರಿಗೆ ತಲುಪಿಸುವ ಸಲುವಾಗಿ ಆರಂಭಿಸಿರುವ ಬೆಳೆ ಸಮೀಕ್ಷೆ ಯೋಜನೆಯನ್ನು ಯಶಸ್ವಿಗೊಳಿಸಲು ರೈತರು ಸಹಕರಿಸಬೇಕೆಂದು ತಹಶೀಲ್ದಾರ್‌ ಕೆ.ಅರುಂಧತಿ ಮನವಿ ಮಾಡಿದರು.

Advertisement

ಚಿಕ್ಕಬಳ್ಳಾಪುರ ಜಿಲ್ಲೆಯ ಬಶೆಟ್ಟಹಳ್ಳಿಹೋಬಳಿಯ ಗಡಿಮಿಂಚೇನಹಳ್ಳಿಹಾಗೂ ಶೆಟ್ಟಿಹಳ್ಳಿ ಗ್ರಾಮದಲ್ಲಿ ರೈತರ ತೋಟದಲ್ಲಿ ಬೆಳೆ ಸಮೀಕ್ಷೆ ನಡೆಸಿ ಮಾತನಾಡಿದ ಅವರು, ರೈತರು ತಮ್ಮ ಮೊಬೈಲ್‌ ಫೋನ್‌ ಮೂಲಕ ಕೃಷಿ ಇಲಾಖೆ ಸಿದ್ಧಪಡಿಸಿರುವ ಆ್ಯಪ್‌ ಬಳಸಿಕೊಂಡು ಬೆಳೆ ನೋಂದಣಿ ಮಾಡಿಸಿಕೊಂಡಲ್ಲಿ ಸರ್ಕಾರಗಳಿಂದ ದೊರೆಯುವ ಸೌಲಭ್ಯ ಪಡೆಯಲು ಅನುಕೂಲ ವಾಗುತ್ತದೆ ಎಂದು ರೈತರಲ್ಲಿ ಅರಿವು ಮೂಡಿಸಿದರು.

ರೈತರ ತೋಟಗಳಿಗೆ ಭೇಟಿ ನೀಡಿ ರೈತರಿಂದಲೇ ಅವರ ಫೋನ್‌ಗಳ ಮೂಲಕ ಬೆಳೆ ಸಮೀಕ್ಷೆ ನಡೆಸಲು ಕ್ರಮ ಕೈಗೊಂಡಿದ್ದೇವೆ ಎಂದರು. ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಡಾ.ಎಸ್‌. ವಿ.ಮಂಜುನಾಥ್‌ ಮಾತ ನಾಡಿ, ಕೃಷಿ ಇಲಾಖೆಯಿಂದ ದೊರೆ ಯುವ ಸೌಲಭ್ಯಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ಬೆಳೆ ಸಮೀಕ್ಷೆ ಯೋಜನೆ ಯಶಸ್ವಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ರೈತರು ಸಹ ಪೂರಕವಾಗಿ ಸ್ಪಂದಿಸುತ್ತಿದ್ದಾರೆ.

ಸಹಕಾರ ನೀಡಿ ಇಲಾಖೆ ನೀಡಿರುವ ಅವಧಿಯೊಳಗೆ ಬೆಳೆ ಸಮೀಕ್ಷೆ ಅಭಿಯಾನ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next