Advertisement

ವಿಜ್ಞಾನ ಬೆಳವಣಿಗೆಗೆ ಕೊಡುಗೆ ನೀಡಿ: ಅಗಸರ

11:16 AM Nov 30, 2021 | Team Udayavani |

ಕಲಬುರಗಿ: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಮೈಗೂಡಿಸಿಕೊಂಡು ವಿಜ್ಞಾನದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಬೇಕೆಂದು ಗುಲಬರ್ಗಾ ವಿಶ್ವವಿದ್ಯಾಲಯದ ಪ್ರೊ| ದಯಾನಂದ ಅಗಸರ ಕರೆನಿಡಿದರು.

Advertisement

ನಗರದ ಶ್ರೀವಿದ್ಯಾ ಮಹಿಳಾ ಪದವಿ ಕಾಲೇಜಿನಲ್ಲಿ ರಾಜ್ಯ ವಿಜ್ಞಾನ ಪರಿಷತ್‌, ವಿಜ್ಞಾನ ಮತ್ತು ತಂತ್ರಜ್ಞಾನ, ಕಾಲೇಜು ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ಪದವಿ ವಿದ್ಯಾರ್ಥಿಗಳು ಮತ್ತು ಬಿ.ಇಡಿ. ಪ್ರಶಿಕ್ಷಣಾಧಿಕಾರಿಗಾಗಿ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ಮಾತೃಭಾಷೆ ಮೂಲಕ ವಿಜ್ಞಾನವನ್ನು ಜನಪ್ರಿಯಗೊಳಿಸಿ ಜನಸಾಮನ್ಯರಿಗೆ ತಲುಪಿಸುವ ವಿಜ್ಞಾನ ಪರಿಷತ್‌ನ ಕಾರ್ಯ ಹೆಮ್ಮೆ ಮೂಡಿಸುವಂತಹದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ವಿಜ್ಞಾನ ಪರಿಷತ್ತಿನ ರಾಜ್ಯಾಧ್ಯಕ್ಷ ಗಿರೀಶ್‌ ಕಡ್ಲೆವಾಡ ಮಾತನಾಡಿ, ರಾಜ್ಯಾದ್ಯಾಂತ ಪರಿಷತ್‌ ಮೂಲಕ ವಿದ್ಯಾರ್ಥಿಗಳಿಗಾಗಿ ವೈವಿಧ್ಯಮಯ ಚಟುವಟಿಕೆ ಆಯೋಜಿಸಲಾಗುತ್ತಿದೆ. ವಿಜ್ಞಾನ ಮತ್ತು ವೈಜ್ಞಾನಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಸಂಘಟಿಸುತ್ತಿದೆ. ವಿಜ್ಞಾನವನ್ನು ಮತ್ತಷ್ಟು ಜನಪ್ರಿಯಗೊಳಿಸಿ ವೈಜ್ಞಾನಿಕ ಮನೋಭಾವ ಬೆಳೆಸಲು ಸಾರ್ವಜನಿಕರು ಕೈಜೋಡಿಸಬೇಕು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ವಿಜ್ಞಾನ ಮತ್ತು ಸಾಹಿತ್ಯ ಒಂದೇ ನಾಣ್ಯದ ಎರಡು ಮುಖಗಳಿದಂತೆ. ನಾಡಿನಾದ್ಯಾಂತ ವಿಜ್ಞಾನದ ಬೆಳವಣಿಗೆ ಕನ್ನಡ ಸಾಹಿತ್ಯ ಪರಿಷತ್ತ್ ಪೂರಕವಾಗಿ ಕಾರ್ಯ ನಿರ್ವಹಿಸಲಿದೆ ಎಂದರು.

Advertisement

ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಸಂಯೋಜಕ ಎಚ್‌.ಎಸ್‌.ಟಿ.ಸ್ವಾಮಿ, ವಿಜ್ಞಾನವನ್ನು ಮಾತೃಭಾಷೆಯ ಮೂಲಕ ಜನಸಾಮಾನ್ಯರಿಗೆ ತಲುಪಿಸುವ ಕೆಲಸವಾಗಬೇಕು. ಜನರಲ್ಲಿನ ಕಂದಾಚಾರಗಳನ್ನು ಹೋಗಲಾಡಿಸುವಲ್ಲಿ ವಿಜ್ಞಾನದ ಪಾತ್ರ ಮಹತ್ವದಾಗಗಿದೆ ಎಂದರು.

ಪ್ರಾಚಾರ್ಯ ಡಾ| ಕವಿರಾಜ ಪಾಟೀಲ, ಸಂಯೋಜಕ ಸುನಿಲಕುಮಾರ ಬೀಡೆ, ಡಾ| ಶಾಮಸುಂದರ, ಡಾ| ಮಂಜುನಾಥ ಜಿ.ಟಿ.ಎಸ್‌, ಡಾ| ವೀರಶೆಟ್ಟಿ, ರಾಜಶೇಖರ ಮಡಿವಾಳ, ಸುಷ್ಮಾ, ಧನರಾಜ ದೇಶಮುಖ, ಚಂದ್ರಕಾಂತ ಸಾವಳಗಿ, ಡಾ| ರಾಜುಮೋದಿ ಮತ್ತಿತರರು ಪಾಲ್ಗೊಂಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next