Advertisement

ಕಾರ್ಯಪಡೆ ಮಾದರಿಯಲ್ಲಿ ಕೋವಿಡ್‌ ನಿಯಂತ್ರಿಸಿ

04:19 PM Aug 15, 2020 | Suhan S |

ಬೀದರ: ಕಾರ್ಯಪಡೆ ಮಾದರಿಯ ಚಟುವಟಿಕೆ ಮತ್ತು ಸಂಘಟಿತ ಪ್ರಯತ್ನ ನಡೆಸಿದಲ್ಲಿ ಕೋವಿಡ್‌-19 ನಿರ್ವಹಣೆ ಸುಲಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿಸೋಜಾ ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

Advertisement

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್‌ ಸೋಂಕಿತರಿಗೆ ಬ್ರಿಮ್ಸ್‌ನಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿದೆ. ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿರುವವರಿಗೆ ಉತ್ತಮ ಆಹಾರ ಮತ್ತು ಚಿಕಿತ್ಸೆ ಸಿಗುತ್ತಿರುವ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಸಲಹೆ ನೀಡಿದರು. ಈಗಾಗಲೇ 61 ವೆಂಟಿಲೇಟರ್ಸ್‌ ಅಳವಡಿಸಲಾಗಿದೆ ಮತ್ತು ಅಗತ್ಯಕ್ಕೆ ತಕ್ಕಂತೆ ಐಸಿಯು ಅಳವಡಿಸುವ ಜೊತೆಗೆ ಜಿಲ್ಲೆಯ ನಿಗದಿತ ಕೋವಿಡ್‌ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಆ. 12ರವರೆಗೆ ದೃಢಪಟ್ಟ 3151 ಕೋವಿಡ್‌ ಸೋಂಕಿತ ಪ್ರಕರಣಗಳ ಪೈಕಿ 2182 ಜನರು ಗುಣಮುಖರಾಗಿದ್ದಾರೆ. 55,157 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಿದ್ದು, 51,288 ಜನರ ವರದಿ ನೆಗೆಟಿವ್‌ ಬಂದಿದೆ ಎಂದು ಡಿಸಿ ರಾಮಚಂದ್ರನ್‌ ಆರ್‌. ಮಾಹಿತಿ ನೀಡಿದರು.

ಕೋವಿಡ್‌ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡುವ ನಿಟ್ಟಿನಲ್ಲಿ 15 ಹೈಫ್ಲೋ ಆಕ್ಸಿಜನ್‌ ಯಂತ್ರಗಳನ್ನು ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಳೆಯ ಬೋಧಕ ಆಸ್ಪತ್ರೆ ಕಟ್ಟಡವನ್ನು ಅವಶ್ಯಕತೆಯನುಸಾರ ನವೀಕರಣಗೊಳಿಸಿ, ಸಂಪೂರ್ಣ ಕೋವಿಡ್‌-19 ಆಸ್ಪತ್ರೆಯನ್ನಾಗಿ ಒಟ್ಟು 550 ಹಾಸಿಗೆಗಳ ಸಾಮರ್ಥ್ಯದಂತೆ ಮಾರ್ಪಾಡು ಮಾಡಲಾಗುತ್ತಿದೆ ಎಂದು ಜಿಲ್ಲಾಧಿ ಕಾರಿಗಳು ತಿಳಿಸಿದರು.

ಡಿಎಚ್‌ಒಗೆ ಸೂಚನೆ: ಅಗತ್ಯವಿರುವೆಡೆ ನೋಡೆಲ್‌ ಅಧಿಕಾರಿಗಳನ್ನು ನೇಮಿಸಿ ಎಲ್ಲ ಕಾರ್ಯ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಡಿಎಚ್‌ಒ ಡಾ| ವಿ.ಜಿ. ರೆಡ್ಡಿ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಇದೇ ವೇಳೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿಸೋಜಾ ತಾಲೂಕು ಮಟ್ಟದ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿ ಕೋವಿಡ್‌ -19ರ ಸ್ಥಿತಿಗತಿ ಮಾಹಿತಿ ಪಡೆದರು.

ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ಎಸ್‌ಪಿ ಡಿ.ಎಲ್‌.ನಾಗೇಶ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸಹಾಯಕ ಆಯುಕ್ತ ಅಕ್ಷಯ ಶ್ರೀಧರ್‌, ಭಂವರಸಿಂಗ್‌ ಮೀನಾ, ಬ್ರಿಮ್ಸ್‌ ನಿರ್ದೇಶಕ ಡಾ| ಶಿವಕುಮಾರ, ಜಿಲ್ಲಾ ಕಣ್ಗಾವಲು ಘಟಕ ಅಧಿಕಾರಿ ಡಾ| ಕೃಷ್ಣಾ ರೆಡ್ಡಿ, ಜಿಲ್ಲಾ ಶಸ್ತÅ ಚಿಕಿತ್ಸಕ ಡಾ| ರತಿಕಾಂತ ಸ್ವಾಮಿ, ವೈದ್ಯಕೀಯ ಅಧೀಕ್ಷಕ ವಿಜಯಕುಮಾರ ಅಂತಪ್ಪನವರ ಸಭೆಯಲ್ಲಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next