Advertisement

ಅಕ್ರಮ ಗೋಸಾಗಾಟ, ಡ್ರಗ್ಸ್‌ ಜಾಲ ಮಟ್ಟ ಹಾಕಿ

11:32 AM Jul 02, 2019 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಮಾದಕ ವಸ್ತುಗಳ ಚಟುವಟಿಕೆ, ಅಕ್ರಮ ಗೋ ಸಾಗಾಟ ಸೇರಿದಂತೆ ಅಪರಾಧ ಚಟುಚಟಿಕೆಗಳನ್ನು ಮಟ್ಟಹಾಕುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಲೋಪವಾದರೆ ಸಂಬಂಧಪಟ್ಟ ಪೊಲೀಸ್‌ ಠಾಣೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಸೂಚಿಸಿದ್ದಾರೆ.

Advertisement

ದ.ಕ. ಜಿಲ್ಲೆಯ ಶಾಸಕರು, ಜಿಲ್ಲಾ ಡಳಿತ ಹಾಗೂ ಪೊಲೀಸ್‌ ಇಲಾಖೆಯ ಜತೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ವಿಶೇಷ ಸಭೆಯ ಬಳಿಕ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು.

ಮಾದಕ ವ್ಯಸನ, ಅಕ್ರಮ ಗೋಸಾಗಾಟ, ಅಕ್ರಮ ಮರಳು ಸಾಗಾಟ ಸೇರಿದಂತೆ ಎಲ್ಲ ರೀತಿಯ ಅಕ್ರಮಗಳಿಗೂ ಕಡಿವಾಣ ಹಾಕ ಬೇಕಾಗಿದೆ. ಪೊಲೀಸರು ಇದನ್ನು ಪ್ರಾಮಾಣಿಕ ಹಾಗೂ ಕಾನೂನು ಬದ್ಧವಾಗಿ ಮಾಡಬೇಕು ಎಂದರು.
ಜನತೆಯಲ್ಲಿ ವಿಶ್ವಾಸ ಮೂಡಿಸುವ ಕೆಲಸ ತುರ್ತಾಗಿ ಆಗಬೇಕು. ಪದೇ ಪದೇ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸುವವರ ಮೇಲೆ ನಿಗಾ ಇಟ್ಟು ಕಠಿನ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ವಿದ್ಯಮಾನಗಳನ್ನು ನಿಗ್ರಹಿಸಲು ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಪೊಲೀಸ್‌ ಆಯುಕ್ತರು ಚರ್ಚೆ ನಡೆಸಿ ಸೂಕ್ತ ಮಾರ್ಗದರ್ಶನಗಳನ್ನು ರೂಪಿಸಬೇಕು. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ತಿಳಿಸಿದರು.

ಶಾಸಕರಾದ ವೇದವ್ಯಾಸ ಕಾಮತ್‌, ಉಮಾನಾಥ ಕೋಟ್ಯಾನ್‌, ರಾಜೇಶ್‌ ನಾಯ್ಕ, ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌, ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌, ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್‌ ಉಪಸ್ಥಿತರಿದ್ದರು.

Advertisement

ಗೋ ಸಾಗಾಟಕ್ಕೆ ಪೊಲೀಸ್‌ ಅನುಮತಿ ಕಡ್ಡಾಯ
ಕೃಷಿ ಚಟುವಟಿಕೆ ಹಾಗೂ ಸಾಕಾಣಿಕೆಗಾಗಿ ಒಂದು ಕಡೆಯಿಂದ ಇನ್ನೊಂದು ಕಡೆಗೆ ಗೋ ಸಾಗಾಟ ಮಾಡುವುದಿದ್ದರೆ ಹತ್ತಿರದ ಪೊಲೀಸ್‌ ಠಾಣೆಗೆ ಕಡ್ಡಾಯವಾಗಿ ತಿಳಿಸಬೇಕು. ಗೋ ಮಾರಾಟ ಮಾಡುವವರು ಹಾಗೂ ಪಡೆಯುವವರು ಈ ಬಗ್ಗೆ ಇಲಾಖೆಯಿಂದ ಸೂಕ್ತ ಅನುಮತಿ ಪಡೆಯಲೇಬೇಕು. ಅನುಮತಿ ಪಡೆಯದ ಸಾಗಾಟವನ್ನು ಮುಂದಿನ ದಿನದಲ್ಲಿ ಅಕ್ರಮ ಎಂದೇ ಪರಿಗಣಿಸಲಾಗುತ್ತದೆ. ಅನುಮತಿ ಪಡೆದ ಬಳಿಕ ಗೋ ಸಾಗಾಟ ಮಾಡುವಾಗ ಪೊಲೀಸ್‌ ಭದ್ರತೆ ನೀಡಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next