Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ದಿಲ್ಲಿಯಲ್ಲಿ ನಡೆದ ಸಭೆಯ ಬಗ್ಗೆ ಅಭ್ಯಂತರ ಇಲ್ಲ. ಆದರೆ ಇಡೀ ಸಂಪುಟ ದಿಲ್ಲಿಗೆ ಹೋಗಿ ಪಕ್ಷದ ಸಭೆ ನಡೆಸಿರುವುದು ರಾಜ್ಯದ ಇತಿಹಾಸದಲ್ಲಿ ನಡೆದಿರಲಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ.ಕನ್ನಡದ ಅಸ್ಮಿತೆ ಬಗ್ಗೆ ಮಾತನಾಡುತ್ತಿದ್ದ ಸಿದ್ದರಾಮಯ್ಯ ಅವರು ಈಗ ಇಡೀ ಸಂಪುಟವನ್ನೇ ದಿಲ್ಲಿಗೆ ಕರೆದುಕೊಂಡು ಹೋಗಿ ಕನ್ನಡದ ಅಸ್ಮಿತೆಗೆ ಧಕ್ಕೆ ತಂದಿದ್ದಾರೆ ಎಂದು ಟೀಕಿಸಿದರು.
ರಾಜ್ಯದ ಜನರ ದಾರಿ ತಪ್ಪಿಸಿ ರಾಜಕಾರಣ ಮಾಡುವ ಉದ್ದೇಶ ನನಗಿಲ್ಲ. ಸಾರಿಗೆ ಇಲಾಖೆಯ ಆದೇಶ ನೋಡಿಯೇ ರಾಜ್ಯದ ಜನತೆಗೆ ಸತ್ಯ ಹೇಳುವ ಕೆಲಸ ಮಾಡಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಅವರು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಗೆ ತಿರುಗೇಟು ನೀಡಿದ್ದಾರೆ. ಸಾರಿಗೆ ನಿಗಮಗಳ ಬೇಡಿಕೆಗೂ ಸರಕಾರ ಬಿಡುಗಡೆ ಮಾಡಿರುವ ಅನುದಾನಕ್ಕೂ ಅರ್ಧದಷ್ಟು ಕಡಿಮೆ ಇದ್ದು, ಹೀಗಿರುವಾಗ ಮೊದಲೇ ನಷ್ಟದಲ್ಲಿ ನಡೆಯುತ್ತಿರುವ ಸಾರಿಗೆ ನಿಗಮಗಳಿಗೆ ಸಿಬಂದಿ ಸಂಬಳ, ಬಸ್‌ಗಳ ನಿರ್ವಹಣೆ, ಡೀಸೆಲ್‌ಗೆ ಹಣದ ಕೊರತೆಯಾಗುವುದು ವಾಸ್ತವಿಕ ಸತ್ಯ. ಇದನ್ನು ನಾನು ಜನತೆಗೆ ತಿಳಿಸಿದ್ದೇನೆ ಎಂದರು.