Advertisement

ಮಳೆಗಾಲದಲ್ಲಿ ಹರಡುವ ರೋಗಗಳ ನಿಯಂತ್ರಣ ಅಗತ್ಯ: ಡಿಸಿ

10:45 PM Jun 13, 2019 | Sriram |

ಮಡಿಕೇರಿ : ಮಳೆಗಾಲದ ಅವಧಿಯಲ್ಲಿ ಹರಡುವಂತಹ ರೋಗ ಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅರಿವು ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ನಿರ್ದೇಶನ ನೀಡಿದ್ದಾರೆ.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಿಫಾ ವೈರಾಣು ಜ್ವರದ ಕುರಿತು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆಗೆ ನಡೆದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮೀಪದ ಕೇರಳ ರಾಜ್ಯದಲ್ಲಿ ನಿಫಾ ವೈರಸ್‌ ಪ್ರಕರಣಗಳು ಕಂಡು ಬರುತ್ತಿರು ವುದರಿಂದ ಕೊಡಗು ಜಿಲ್ಲೆಯಲ್ಲಿಯೂ ಸಹ ಕಟ್ಟೆಚ್ಚರ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ನಿಫಾ ವೈರಸ್‌ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಮಾಹಿತಿ ನೀಡಬೇಕು. ಜೊತೆಗೆ ಮಳೆಗಾಲದ ಸಂದರ್ಭದಲ್ಲಿ ಹರಡುಬಹುದಾದ ಡೆಂಗ್ಯು, ಚಿಕನ್‌ಗುನ್ಯ, ಮಲೇರಿಯಾ, ಕಾಮಾಲೆ ಮತ್ತಿತರ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕೆ.ಮೋಹನ್‌ ಅವರು ನಿಫಾ ವೈರಸ್‌ ಜ್ವರ ಸಂಬಂಧಿಸಿದಂತೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು.

Advertisement

ಪ್ರಾಣಿಗಳು ಮತ್ತು ಪಕ್ಷಿಗಳು ಕಚ್ಚಿರುವ ಹಣ್ಣುಗಳನ್ನು ತಿನ್ನಬಾರದು. ಬಾವಲಿಗಳು ಅತಿ ಹೆಚ್ಚಾಗಿ ಕಂಡುಬರುವ ಪ್ರದೇಶಗಳಿಂದ ಸಂಗ್ರಹಿಸಿದ ನೀರಾ ಕುಡಿಯಬಾರದು. ಸೋಂಕಿತ ಪ್ರದೇಶಗಳಿಗೆ ಭೇಟಿ ನೀಡುವಾಗ ಪ್ರತಿಬಂಧಕ ಉಪಾಯಗಳನ್ನು ಕೈಗೊಳ್ಳುವುದು, ರೋಗಿಯ ಶರೀರ ಸ್ರಾವದೊಂದಿಗೆ (ಜೊಲ್ಲು, ಬೆವರು, ಮೂತ್ರ ಇತ್ಯಾದಿ) ಸಂಪರ್ಕ ತಪ್ಪಿಸಬೇಕು ಎಂದು ಅವರು ತಿಳಿಸಿದರು.

ಸಾಂಕ್ರಾಮಿಕ ರೋಗಗಳ ನಿಯಂತ್ರ ಣಾಧಿಕಾರಿ ಡಾ|ಎಂ.ಶಿವಕುಮಾರ್‌ ಅವರು ಮಾತನಾಡಿ ಹಂದಿ, ಕುದುರೆ, ನಾಯಿ ಮತ್ತು ಬೆಕ್ಕುಗಳಂತಹ ಸೋಂಕಿತ ಜಾನುವಾರುಗಳು ಮಧ್ಯಾಂತರ ಮೂಲ ಗಳಾಗಿರುವುದರಿಂದ ಇವುಗಳನ್ನು ಪ್ರತ್ಯೇಕವಾಗಿಡಿ, ಶಂಕಿತ ಪ್ರಕರಣಗಳನ್ನು ಪ್ರತ್ಯೇಕವಾಗಿಡಬೇಕು.

ಮಾಸ್ಕ್ ಮತ್ತು ಗ್ಲೌಸ್‌ ತಪ್ಪದೇ ಬಳಸುವುದು
ರೋಗಿಗಳು ಬಳಸುವ ವಸ್ತುಗಳನ್ನು ಪ್ರತ್ಯೇಕವಾಗಿ ಸಾಬೂನು ನೀರು ಬಳಸಿ ಶುಚಿಗೊಳಿಸಬೇಕು. ಸೋಂಕಿತ ಜನರ ಸಂಪರ್ಕಕ್ಕೆ ಬಂದ ನಂತರ ಕೈಗಳನ್ನು ಸರಿಯಾಗಿ ತೊಳೆದುಕೊಳ್ಳಬೇಕು. ರೋಗಿ ಗಳನ್ನು ಉಪಚರಿಸುವಾಗ ಮಾಸ್ಕ್ ಮತ್ತು ಗ್ಲೌಸ್‌ ತಪ್ಪದೇ ಬಳಸುವುದು, ಎಲ್ಲ ರೀತಿಯ ಹಣ್ಣುಗಳನ್ನು ಚೆನ್ನಾಗಿ ತೊಳೆದು, ಸಿಪ್ಪೆ ಸುಲಿದು ಮತ್ತು ಬೇಯಿಸಿ ತಿನ್ನುವುದು, ಫ್ಲೋ ರೀತಿಯ ಲಕ್ಷಣಗಳು ಕಂಡುಬಂದರೆ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ, ನೆರವಿಗಾಗಿ 104 ಕ್ಕೆ ಕರೆ ಮಾಡುವಂತಾಗಬೇಕು ಎಂದು ಅವರು ಮಾಹಿತಿ ನೀಡಿದರು.

ರೋಗಿಯ ಶರೀರದ ಸ್ರಾವ ದೊಂದಿಗೆ(ಜೊಲ್ಲು, ಬೇವರು ಮಾತ್ರ) ಸಂಪರ್ಕ ತಪ್ಪಿಸಿ. ರೋಗ ಹರಡುವ ರೀತಿ ಮತ್ತು ರೋಗ ಲಕ್ಷಣಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದರು.

ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ, ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅರುಂಧತಿ, ತಾಲೂಕು ವೈದ್ಯಾಧಿಕಾರಿಯಾದ ಡಾ|ಎ.ಸಿ.ಶಿವ ಕುಮಾರ್‌ (ಮಡಿಕೇರಿ) ಡಾ|ಗುರುರಾಜ್‌(ವಿರಾಜಪೇಟೆ), ಡಾ|ಲೋಕೇಶ್‌ ಮಾಹಿತಿ ನೀಡಿದರು.

ನಿಫಾ ವೈರಸ್‌ ಜ್ವರ
ಬಾವಲಿಗಳಿಂದ ಇತರ ಪ್ರಾಣಿಗಳಿಗೆ, ಪ್ರಾಣಿಗಳಿಂದ ಹಾಗೂ ಬಾವಲಿಗಳಿಂದ ಮನುಷ್ಯನಿಗೆ ಹರಡುತ್ತದೆ, ಸೋಂಕಿತ ಬಾವಲಿ ಮತ್ತು ಪ್ರಾಣಿಗಳಿಂದ ಸ್ರವಿಸುವ ದ್ರವಗಳ ನೇರ ಸಂಪರ್ಕ ಹೊಂದುವುದರಿಂದ ಹರಡುತ್ತದೆ, ಸೋಂಕಿತ ಬಾವಲಿ ಮತ್ತು ಪ್ರಾಣಿಗಳ ಸೋಂಕಿತ ಪದಾರ್ಥಗಳನ್ನು ಉಪಯೋಗಿಸುವುದರಿಂದ ಹರಡಬಹುದು ಎಂದು ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ| ಎಂ.ಶಿವಕುಮಾರ್‌ಅವರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next