Advertisement

Mangaluru ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ: ಭಂಡಾರಿ ಮನವಿ

11:42 PM Sep 02, 2024 | Team Udayavani |

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಕಠಿನ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಅವರಿಗೆ ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಮನವಿ ಮಾಡಿದ್ದಾರೆ.

Advertisement

ಕರಾವಳಿ ಜಿಲ್ಲೆಯಲ್ಲಿ ಡ್ರಗ್‌ ಮಾಫಿಯಾ ಹೆಚ್ಚಾಗಿದೆ. ಅತ್ಯಾಚಾರ ಪ್ರಕರಣಗಳಲ್ಲಿ ಡ್ರಗ್‌ ಮಾಫಿಯಾ ಪಾತ್ರ ಸ್ಪಷ್ಟವಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ, ಕೊಲೆ, ದರೋಡೆ ಇತ್ಯಾದಿ ಪ್ರಕರಣಗಳು ಹೆಚ್ಚಾಗಿವೆ.

ಮಾದಕ ವ್ಯಸನದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯುವಕರು, ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಇಸ್ಪೀಟು, ಮಟ್ಕಾ ಹಾವಳಿ ಹೆಚ್ಚಾಗುತ್ತಿದೆ.

ಇವುಗಳನ್ನು ನಿಯಂತ್ರಿಸುವಂತೆ ಪೊಲೀಸ್‌ ಇಲಾಖೆ ಕಠಿನ ಕಾನೂನು ಕ್ರಮ ಕೈಗೊಳ್ಳುವಂತೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next