Advertisement

ಕೋವಿಡ್ : ಕಾಸರಗೋಡು ಜಿಲ್ಲೆಯಲ್ಲಿ ವಾರ್ಡ್ ಮಟ್ಟದಲ್ಲಿ ನಿಯಂತ್ರಣ

09:04 PM Jun 16, 2021 | Team Udayavani |

ಕಾಸರಗೋಡು: ಕೋವಿಡ್ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು.

Advertisement

ಬುಧವಾರ ( ಜೂನ್ 16) ಜಿಲ್ಲಾ ಮಟ್ಟದ ಕೊರೋನಾ ಕೋರ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೋಗಿಗಳ ಮಟ್ಟದ ಗಣನೆಯ ಹಿನ್ನೆಲೆಯಲ್ಲಿ ಸ್ಥಳೀಯ ಮಟ್ಟದ ಲಾಕ್ ಡೌನ್ ಇರುವುದು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ವಾರ್ಡ್ ಮಟ್ಟದ ರೋಗ ಖಚಿತತೆ ಗಣನೆ ಪ್ರತಿನಿತ್ಯ ಜಿಲ್ಲಾ ಪಿಡುಗು ನಿವಾರಣೆ ಪ್ರಾಧಿಕಾರಕ್ಕೆ ಹಸ್ತಾಂತರಿಸಲಿದೆ. ಜಿಲ್ಲಾ ಪಿಡುಗು ನಿವಾರಣೆ ಪ್ರಾಧಿಕಾರ ರೋಗ ಗಣನೆಯನ್ನು ಪ್ರತಿ ಮಂಗಳವಾರ ಜಿಲ್ಲಾಧಿಕಾರಿಗೆ ಸಲ್ಲಿಸಬೇಕು. ಬುಧವಾರದ ಕೊರೋನಾ ಕೋರ್ ಸಮಿತಿ ಸಭೆಗಳಲ್ಲಿ ಈ ಗಣನೆಗಳ ಹಿನ್ನೆಲೆಯಲ್ಲಿ ಏರ್ಪಡಿಸಲಾಗುವ ನಿತಯಂತ್ರಣಗಳ ತೀರ್ಮಾನ ಕೈಗೊಳ್ಳಲಾಗುವುದು.

ಜಿಲ್ಲಾ ವೈದ್ಯಧಿಕಾರಿ,ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ, ಹೆಚ್ಚುವರಿ ದಂಡನಧಿಕಾರಿ ಈ ಬಗ್ಗೆ ಅಗತ್ಯದ ಕ್ರಮ ಕೈಗೊಳ್ಳುವರು. ಜಿಲ್ಲೆಯಲ್ಲಿ ಅತ್ಯಧಿಕ ರೋಗಿಗಳಿರುವ ಪ್ರದೇಶಗಳನ್ನು ಪತ್ತೆ ಮಾಡಿ ಆಯಾ ವಲಯಗಳಲ್ಲಿ ಮಾತ್ರ ನಿಗದಿಪಡಿಸುವ ಉದ್ದೇಶವಿರುವ ಸ್ಟ್ರೇಟೆಡ್ ಮಲ್ಟಿ ಸ್ಟೇಜ್ ರಾಂಡಂ ಸಾಂಪ್ಲಿಂಗ್ ತಪಾಸಣೆ ಕ್ರಮದಲ್ಲೂ ಬದಲಾವಣೆ ತರಲಾಗುವುದು. ವಾರ್ಡೊಂದರಲ್ಲಿ ತಲಾ 40 ಮಂದಿಯಂತೆ ಪ್ರತಿದಿನ 55 ವಾರ್ಡ್ ಗಳಲ್ಲಿ ತಪಾಸಣೆ ನಡೆಸಲಾಗುವುದು. 7 ದಿನಗಳ ನಂತರ ತಪಾಸಣೆ ಪುನರಾವರ್ತಿಸಲಾಗುವುದು ಎಂದು ನಿರ್ಧರಿಸಲಾಗಿದೆ. ಜಿಲ್ಲೆಯಲ್ಲಿ 8 ಆರೋಗ್ಯ ಬ್ಲೋಕ್ ಗಳಲ್ಲಿ 777 ವಾರ್ಡ್ ಗಳಿವೆ. ದಿನವೊಂದಕ್ಕೆ 55 ವಾರ್ಡ್ ಗಳಲ್ಲಿ 2200 ಮಂದಿಗೆ ಕೋವಿಡ್ ತಪಾಸಣೆ ನಡೆಸಲಾಗುವುದು. ಆಟೋರಿಕ್ಷಾ ಚಾಲಕರು, ಬಸ್ ಸಿಬ್ಬಂದಿ, ಅಂಗಡಿ ಮಾಲೀಕರು, ಅಂಗಡಿಗಳ, ಕಾರ್ಖಾನೆಗಳ, ಉದ್ದಿಮೆ- ವ್ಯಾಪಾರ ಸಂಸ್ಥೆಗಳ ಸಿಬ್ಬಂದಿ ಸಹಿತ ಸಾರ್ವಜನಿಕರೊಂದಿಗೆ ಸತತ ಸಂಪರ್ಕ ಹೊಂದುವ, ಕಚೇರಿಗಳ ಸಿಬ್ಬಂದಿಯ ತಪಾಸಣೆ ನಡೆಸಲಾಗುವುದು ಎಂದರು.

ಪರಿಶಿಷ್ಟ ಜಾತಿ-ಪಂಗಡ ಕಾಲನಿಗಳ ವಾಕ್ಸಿನೇಷನ್ ತುರ್ತಾಗಿ ನಡೆಸಲು ಸಂಬಂಧ ಪಟ್ಟ ಇಲಾಖೆಗಳ ಜಿಲ್ಲಾ ಮಟ್ಟದ ಸಿಬ್ಬಂದಿಗೆ ಹೊಣೆ ನೀಡಲಾಗಿದೆ. ಕಾಲನಿಗಳಲ್ಲಿ ತುಳು ಭಾಷೆಯಲ್ಲೂ ಜಾಗೃತಿ ನಡೆಸಲಾಗುವುದು.

Advertisement

ಜಿಲ್ಲೆಯಲ್ಲಿ ಆಕ್ಸಿಜನ್ ಕ್ಷಾಮ ತಲೆದೋರದಂತೆ ಚಟ್ಟಂಚಾಲ್ ನಲ್ಲಿ ಸಾರ್ವಜನಿಕ ವಲಯದಲ್ಲಿ ಸ್ಥಾಪಿಸಲಾಗುವ ಪ್ಲಾಂಟ್ ನ ನಿರ್ಮಾಣ ನಿಗದಿತ ದಿನಗಳಲ್ಲಿ ಪೂರ್ಣಗೊಳಿಸಲಾಗುವುದು. ಅನಂತಪುರದಲ್ಲಿ ಖಾಸಗಿ ವಲಯದಲ್ಲಿ ದ್ರವೀಕೃತ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲೂ ಕ್ರಮ ಕೈಗೊಳ್ಳಲಾಗುವುದು. ಉಭಯ ಪ್ಲಾಂಟ್ ಗಳೂ ನಿಗದಿತ ಸಮಯದಲ್ಲೇ ಪೂರ್ಣಗೊಳ್ಳಲಿದೆ ಎಂದು ತಿಳಿಸಲಾಗಿದೆ.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಬಿ.ರಾಜೀವ್, ಹೆಚ್ಚುವರಿ ದಂಡನಧಿಕಾರಿ ಅತುಲ್ ಎಸ್.ನಾಥ್, ಜಿಲ್ಲಾ ವೈದ್ಯಧಿಕಾರಿ (ಆರೋಗ್ಯ) ಡಾ.ಕೆ.ಆರ್.ರಾಜನ್, ಸಮಿತಿಯ ಇತರ ಸದಸ್ಯರು ಉಪಸ್ಥಿತರಿದ್ದರು.

ನಿಬಂಧನೆಗಳು ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಮಾತ್ರ!:

ಪರೀಕ್ಷಾ ಸಕಾರಾತ್ಮಕ ದರ (ಟಿಪಿಆರ್) ಆಧಾರದಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಗ್ರಾ.ಪಂ. ವ್ಯಾಪ್ತಿಗಳಲ್ಲಿ ಸರಾಸರಿ 7 ದಿನಗಳ ಟೆಸ್ಟ್ ಪಾಸಿಟಿವಿಟಿ ದರವು 8 ಶೇ ವರೆಗೆ ಇದ್ದರೆ, ಅದನ್ನು ‘ಕಡಿಮೆ ಹರಡುವಿಕೆ’ ಎಂದು ಪರಿಗಣಿಸಲಾಗುತ್ತದೆ. ಶೇಕಡಾ 8 ರಿಂದ 20 ರಷ್ಟು ಇದ್ದರೆ ಮಧ್ಯಮ ಹರಡುವ ಪ್ರದೇಶವೆಂದು ಪರಿಗಣಿಸಲಾಗಿದೆ. ಇದು ಶೇಕಡಾ 20 ಕ್ಕಿಂತ ಹೆಚ್ಚಿದ್ದರೆ, ಅದನ್ನು ವಿಸ್ತರಣಾ ಪ್ರದೇಶವೆಂದು ಪರಿಗಣಿಸಲಾಗುತ್ತದೆ ಮತ್ತು ನಿರ್ಬಂಧಗಳನ್ನು ವಿಧಿಸಲಾಗುತ್ತದೆ.  ಶೇಕಡಾ 30 ಕ್ಕಿಂತ ಹೆಚ್ಚು ಟೆಸ್ಟ್ ಪಾಸಿಟಿವಿಟಿ ಇರುವಲ್ಲಿ ಲಾಕ್ ಡೌನ್ ನಿಯಂತ್ರಣಗಳಿರುತ್ತವೆ.  ವಿವಾಹ ಮತ್ತು ಮರಣೋತ್ತರ ಸಮಾರಂಭಗಳಿಗೆ ಕೇವಲ 20 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಇತರ ಜನಸಂದಣಿ ಅಥವಾ ಸಾರ್ವಜನಿಕ ಕಾರ್ಯಕ್ರಮಗಳನ್ನು ಅನುಮತಿಸಲಾಗುವುದಿಲ್ಲ.

 ಎಲ್ಲಾ ಅಗತ್ಯ ಸೇವಾ ಕೇಂದ್ರಗಳನ್ನು ತೆರೆಯಬಹುದು:

ಕೈಗಾರಿಕೆ ಮತ್ತು ಕೃಷಿ ಕ್ಷೇತ್ರಗಳಲ್ಲಿನ ಚಟುವಟಿಕೆಗಳ ವ್ಯಾಪಾರ ಕೇಂದ್ರ ಸಹಿತ ಇತರ ವ್ಯವಸ್ಥೆಗಳನ್ನು ಎಲ್ಲಾ ಗ್ರಾ.ಪಂ. ವ್ಯಾಪ್ತಿಗಳಲ್ಲೂ ಅನುಮತಿಸಲಾಗುವುದು. ಈ ಪ್ರದೇಶಗಳಲ್ಲಿನ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ತುರ್ತು ಅಗತ್ಯದ ಮಳಿಗೆಗಳು ಪ್ರತಿದಿನ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ತೆರೆದಿರುತ್ತವೆ. ಅಕ್ಷಯ ಕೇಂದ್ರಗಳು ಸೋಮವಾರದಿಂದ ಶುಕ್ರವಾರದವರೆಗೆ ತೆರೆದಿರುತ್ತದೆ.

ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್ಡೌನ್!:

ಪ್ರತಿ ಶನಿವಾರ ಮತ್ತು ಭಾನುವಾರ ರಾಜ್ಯದಾದ್ಯಂತ ಮುಂದಿನ ಆದೇಶ ಬರುವವರೆಗೂ ಪೂರ್ಣ ಲಾಕ್ಡೌನ್ ಇರುತ್ತದೆ. ಜೂನ್ 17 ರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು, ಸಾರ್ವಜನಿಕ ವಲಯದ ಸಂಸ್ಥೆಗಳು, ಕಂಪನಿಗಳು, ಆಯೋಗಗಳು, ನಿಗಮಗಳು ಮತ್ತು ಸ್ವಾಯತ್ತ ಸಂಸ್ಥೆಗಳು ದಿನನಿತ್ಯದ ಶೇಕಡಾ 25 ರಷ್ಟು ಸಿಬ್ಬಂದಿಗಳ ಹಾಜರಾತಿಯೊಂದಿಗೆ ಪಾಳಿ ವ್ಯವಸ್ಥೆ(ಶಿಪ್ಟ್) ಆಧಾರದ ಮೇಲೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು. ಸರ್ಕಾರಿ ಸಚಿವಾಲಯಗಳಲ್ಲಿ ಶೇಕಡಾ 50 ರಷ್ಟು ಸಿಬ್ಬಂದಿಗಳು ಶಿಪ್ಟ್ ವ್ಯವಸ್ಥೆಯ ಆಧಾರದಲ್ಲಿ ಕಾರ್ಯನಿರ್ವಹಿಸಲಿವೆ.

Advertisement

Udayavani is now on Telegram. Click here to join our channel and stay updated with the latest news.

Next