Advertisement
ಸೋಮವಾರ ಸುದ್ದಿಗಾರರ ಜತೆಗೆ ಮಾತ ನಾಡಿದ ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಿ ರೈತರನ್ನು ಅವಮಾನಿಸುತ್ತಿದ್ದಾರೆ. ಅಂಥ ಸಚಿವರಿಗೆ ಮುಖ್ಯಮಂತ್ರಿ ಬುದ್ಧಿವಾದ ಹೇಳಲಿ. ಒಂದು ವೇಳೆ ತಿದ್ದಿಕೊಳ್ಳದೆ ಹೋದರೆ ಸಚಿವರ ರಾಜೀನಾಮೆ ಪಡೆಯಲಿ ಎಂದರು.
ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಮಾತನಾಡಿ, ರೈತರನ್ನು ಅಪಮಾನಿಸುವ ರೀತಿಯಲ್ಲಿ ಹೇಳಿಕೆ ನೀಡಿರುವ ಸಚಿವ ಶಿವಾನಂದ ಪಾಟೀಲ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು. ಬರದಿಂದಾಗಿ ರೈತರು ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರುವುದು ಸರಕಾರದ ಕರ್ತವ್ಯ. ಅಧಿಕಾರ ತಲೆಗೆ ಹೋದ ಮೇಲೆ ಇಂತಹ ದುರಹಂಕಾರಿ ಮಾತುಗಳು ಬರುತ್ತವೆ ಎಂದರು.
Related Articles
ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ಹಲವು ಸಚಿವರು ಸಮಜಾಯಿಷಿ ನೀಡಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ರೈತರು ಯಾವುದೇ ಕಾರಣಕ್ಕೂ ಬರಗಾಲ ಬರಲಿ ಅಂತ ಅಪೇಕ್ಷಿಸುವುದಿಲ್ಲ. ಬರಗಾಲ ಬಂದರೆ ರೈತರಿಗೆ ಮಾತ್ರವಲ್ಲ, ಎಲ್ಲರಿಗೂ ತೊಂದರೆ ಆಗುತ್ತದೆ. ಸಚಿವರು ಏನೋ ಮಾತನಾಡುವಾಗ ಎಲ್ಲೋ ತಪ್ಪಾಗಿರಬೇಕು ಎಂದು ಸಮಜಾಯಿಷಿ ನೀಡಿದರು. ರೈತರು, ಬರ, ಸಾಲ ಮನ್ನಾ ವಿಷಯದಲ್ಲಿ ಶಿವಾನಂದ ಪಾಟೀಲ್ ಏನು ಹೇಳಿಕೆ ನೀಡಿದ್ದಾರೆಂದು ಗಮನಿಸಿಲ್ಲ. ಹೀಗಾಗಿ ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.
Advertisement
ರೈತ ಮುಖಂಡರ ಆಕ್ರೋಶಬೆಂಗಳೂರು: ಶಿವಾನಂದ ಪಾಟೀಲ್ ಹೇಳಿಕೆಗೆ ರೈತ ಮುಖಂಡರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು, ಪಾಟೀಲ್ ಅವರು ರೈತರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದು, ಇದು ಅವಿವೇಕದ ಪರಮಾವಧಿಯಾಗಿದೆ. ಮಂತ್ರಿಯಾಗಿ ಜವಾಬ್ದಾರಿಯುತ ಹೇಳಿಕೆ ನೀಡುವುದನ್ನು ಅವರು ಕಲಿಯಬೇಕು. ರೈತರು ಸರಕಾರ ಸಾಲ ಮನ್ನಾ ಮಾಡಲಿ ಎಂದು ಬಯಸುವುದಿಲ್ಲ. ಪಡೆದಿರುವ ಸಾಲವನ್ನು ರೈತರು ಭೂಮಿಗೆ ಹಾಕಿದ್ದಾರೆ. ಆದರೆ ಪ್ರಾಕೃತಿಕ ಕಾರಣಗಳಿಂದಾಗಿ ಬೆಳೆ ಬಾರದೆ ಸಾಲ ಮರುಪಾವತಿ ಮಾಡಲು ಆಗುತ್ತಿಲ್ಲ ಎಂದು ರೈತರು ಹೇಳುತ್ತಿದ್ದಾರೆ ಎಂದರು. ರಘು ಕೌಟಿಲ್ಯ ಆಕ್ರೋಶ
ಮೈಸೂರು: ರೈತರ ಬಗ್ಗೆ ಲಘುವಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಆಗ್ರಹಿ ಸಿ ದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರ ಹೇಳಿಕೆ ಕ್ರೌರ್ಯದ ಪರಮಾವಧಿ. ರೈತರ ಬಗ್ಗೆ ತಾತ್ಸಾರದಿಂದ ಮಾತನಾಡುವ ಹಾಗೂ ಅವರ ಆತ್ಮಹತ್ಯೆ ಬಗ್ಗೆ ವ್ಯಂಗ್ಯವಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದರು. ಶಿವಾನಂದ ಪಾಟೀಲ್ ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟಗಳನ್ನು ಅವಹೇಳನ ಮಾಡುವುದು ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮ ದಿಂದ ಮಾತನಾಡಬೇಕು. ನಾನು ಕೃಷಿ ಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು.
– ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಇದೇ ಸಚಿವರು ಈ ಹಿಂದೆ 5 ಲಕ್ಷ ರೂ. ಪರಿಹಾರ ಸಿಗುತ್ತದೆಂಬ ಕಾರಣಕ್ಕೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದಿದ್ದರು. ಈಗ ಮತ್ತೆ ರೈತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಯಾವುದೇ ಸಚಿವರು ಇಂಥ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ರೈತ ವಿರೋ ಧಿ ಹೇಳಿಕೆ ನೀಡುವ ಸಚಿವರಿಗೆ ಅನ್ನದಾತರ ಬಗ್ಗೆ ಗೌರವ ಇದೆಯೋ, ಇಲ್ಲವೋ ಎಂಬುದನ್ನು ಜನರೇ ಹೇಳಬೇಕು.
-ಬಸನಗೌಡ ಪಾಟೀಲ್ ಯತ್ನಾಳ್ , ಬಿಜೆಪಿ ಶಾಸಕ