Advertisement
ವಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಖಾದ್ರಿ ಕ್ಷಮೆಯಾಚನೆಗೆ ಆಗ್ರಹಿಸಿದ್ದಾರೆ.ಅಂಬೇಡ್ಕರ್ ಅವರು ಇಸ್ಲಾಂ ಧರ್ಮ ಸ್ವೀಕರಿಸುವುದು ದೂರದ ಮಾತು. ಅವರಿಗೆ ಇಸ್ಲಾಂ ಧರ್ಮದ ಬಗ್ಗೆ ಇದ್ದ ಅಭಿಪ್ರಾಯ ಎಂಥದ್ದು ಎನ್ನುವುದನ್ನ ಕಾಂಗ್ರೆಸ್ ನಾಯಕರು ಒಮ್ಮೆ ಓದಿಕೊಳ್ಳಬೇಕು. ಇಸ್ಲಾಂಗೆ ತಲೆ ಎತ್ತುವ ಅವಕಾಶ ಸಿಕ್ಕಾಗಲೆಲ್ಲ ಇನ್ನೊಂದು ಸಂಸ್ಕೃತಿಯನ್ನು ನಾಶ ಮಾಡಿದೆ. ಇಸ್ಲಾಂ ಜೊತೆ ಒಂದು ದೇಶದೊಳಗೆ ನೆಮ್ಮದಿಯಾಗಿರಲು ಸಾಧ್ಯವಿಲ್ಲ ಎಂದು ಇಸ್ಲಾಂ ಧರ್ಮದ ಗುಣವನ್ನು ಅಂಬೇಡ್ಕರ್ ಅವರು ಬಹಳ ಹಿಂದೆಯೇ ಸ್ಪಷ್ಟವಾಗಿ ಬಣ್ಣಿಸಿದ್ದಾರೆ ಎಂದು ಆರ್.ಅಶೋಕ್ ಹೇಳಿದರು.