Advertisement

Congress ಪಕ್ಷದಿಂದಲೇ ಹಾಸನದಲ್ಲಿ ಸಮಾವೇಶ: ಹೈಕಮಾಂಡ್‌ ಒಪ್ಪಿಗೆ

01:00 AM Nov 30, 2024 | Team Udayavani |

ಬೆಂಗಳೂರು: ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಡಿ. 5ರಂದು ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶದ ಹೆಸರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಸಮಾವೇಶವನ್ನು ಪಕ್ಷದ ಆಶ್ರಯದಡಿಯೇ ನಡೆಸಲು ಕಾಂಗ್ರೆಸ್‌ ಹೈಕಮಾಂಡ್‌ ಒಪ್ಪಿಗೆ ನೀಡಿದೆ.

Advertisement

ಸಮಾವೇಶಕ್ಕೆ ಕಾಂಗ್ರೆಸ್‌ ನಲ್ಲೇ ಒಂದು ಬಣ ಅಸಮಾಧಾನಗೊಂಡಿತ್ತಲ್ಲದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅನಾಮ ಧೇಯ ಪತ್ರವೂ ರವಾನೆಯಾಗಿತ್ತು. ಸಮಾವೇಶ ಮಾಡುವುದಾದರೆ ಪಕ್ಷದ ಆಶ್ರಯದಲ್ಲೇ ಮಾಡಬೇಕು ಎಂಬು ದಾಗಿ ಪತ್ರದಲ್ಲಿತ್ತು.

ಖರ್ಗೆ, ರಾಹುಲ್‌ ಸಮ್ಮುಖದಲ್ಲಿ ಚರ್ಚೆ
ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಜತೆ ನಡೆದ ಸಮಾಲೋಚನೆ ವೇಳೆ ಸ್ವಾಭಿಮಾನಿ ಸಮಾವೇಶದ ಬಗ್ಗೆಯೂ ಚರ್ಚೆಯಾಗಿದ್ದು, ಉಪ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ಕಾರ್ಯಕರ್ತರು, ಹಿಂದುಳಿದ ವರ್ಗಗಳು ಸೇರಿ ಸಮಾವೇಶ ಆಯೋಜಿಸುತ್ತಿದ್ದಾರೆ. 4ರಿಂದ 5 ಲಕ್ಷ ಜನರನ್ನು ಸೇರಿಸುವ ಚಿಂತನೆ ಇದೆ. ಇದರಿಂದ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಸಂಘಟನೆಗೆ ಸಹಾಯವಾಗಲಿದೆ ಎಂದು ಸ್ಪಷ್ಟನೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

ಹಸುರು ನಿಶಾನೆ
ಉಪ ಚುನಾವಣೆ ಗೆಲುವು ಹಿನ್ನೆಲೆಯಲ್ಲಿ ಈ ಬೃಹತ್‌ ಸಮಾವೇಶ
ಪಕ್ಷ ಹಾಗೂ ಹಿಂದುಳಿದ ವರ್ಗಗಳ ಸಂಘಟನೆಗೆ ಇದು ಸಹಾಯಕ
ಕಾಂಗ್ರೆಸ್‌ ಹೈಕಮಾಂಡ್‌ಗೆ ಸಿದ್ದರಾಮಯ್ಯ ಮನವರಿಕೆ
ಕಾಂಗ್ರೆಸ್‌ ಆಶ್ರಯದಲ್ಲಿ ಸಮಾವೇಶ ನಡೆಸಲು ಹೈಕಮಾಂಡ್‌ ಒಪ್ಪಿಗೆ
ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರು, ರಾಜ್ಯ ಉಸ್ತುವಾರಿಗೂ ಆಹ್ವಾನ

ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ. ಹೈಕಮಾಂಡ್‌ಗೆ ಅನಾಮಧೇಯ ಪತ್ರ ಬರೆದಿರುವ ಬಗ್ಗೆ ಮಾಹಿತಿ ಇಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಚರ್ಚೆ ಮಾಡಲಿಲ್ಲ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

Advertisement

ಸಮಾವೇಶ ವಿರೋಧಿಸಿ ಪತ್ರ ಬರೆದಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಆದರೆ ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ.
– ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

Advertisement

Udayavani is now on Telegram. Click here to join our channel and stay updated with the latest news.

Next