Advertisement
ಸಮಾವೇಶಕ್ಕೆ ಕಾಂಗ್ರೆಸ್ ನಲ್ಲೇ ಒಂದು ಬಣ ಅಸಮಾಧಾನಗೊಂಡಿತ್ತಲ್ಲದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅನಾಮ ಧೇಯ ಪತ್ರವೂ ರವಾನೆಯಾಗಿತ್ತು. ಸಮಾವೇಶ ಮಾಡುವುದಾದರೆ ಪಕ್ಷದ ಆಶ್ರಯದಲ್ಲೇ ಮಾಡಬೇಕು ಎಂಬು ದಾಗಿ ಪತ್ರದಲ್ಲಿತ್ತು.
ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಜತೆ ನಡೆದ ಸಮಾಲೋಚನೆ ವೇಳೆ ಸ್ವಾಭಿಮಾನಿ ಸಮಾವೇಶದ ಬಗ್ಗೆಯೂ ಚರ್ಚೆಯಾಗಿದ್ದು, ಉಪ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ಕಾರ್ಯಕರ್ತರು, ಹಿಂದುಳಿದ ವರ್ಗಗಳು ಸೇರಿ ಸಮಾವೇಶ ಆಯೋಜಿಸುತ್ತಿದ್ದಾರೆ. 4ರಿಂದ 5 ಲಕ್ಷ ಜನರನ್ನು ಸೇರಿಸುವ ಚಿಂತನೆ ಇದೆ. ಇದರಿಂದ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಸಂಘಟನೆಗೆ ಸಹಾಯವಾಗಲಿದೆ ಎಂದು ಸ್ಪಷ್ಟನೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಹಸುರು ನಿಶಾನೆ
ಉಪ ಚುನಾವಣೆ ಗೆಲುವು ಹಿನ್ನೆಲೆಯಲ್ಲಿ ಈ ಬೃಹತ್ ಸಮಾವೇಶ
ಪಕ್ಷ ಹಾಗೂ ಹಿಂದುಳಿದ ವರ್ಗಗಳ ಸಂಘಟನೆಗೆ ಇದು ಸಹಾಯಕ
ಕಾಂಗ್ರೆಸ್ ಹೈಕಮಾಂಡ್ಗೆ ಸಿದ್ದರಾಮಯ್ಯ ಮನವರಿಕೆ
ಕಾಂಗ್ರೆಸ್ ಆಶ್ರಯದಲ್ಲಿ ಸಮಾವೇಶ ನಡೆಸಲು ಹೈಕಮಾಂಡ್ ಒಪ್ಪಿಗೆ
ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರು, ರಾಜ್ಯ ಉಸ್ತುವಾರಿಗೂ ಆಹ್ವಾನ
Related Articles
– ಸಿದ್ದರಾಮಯ್ಯ, ಮುಖ್ಯಮಂತ್ರಿ
Advertisement
ಸಮಾವೇಶ ವಿರೋಧಿಸಿ ಪತ್ರ ಬರೆದಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಆದರೆ ಸಮಾವೇಶವನ್ನು ಯಾವ ಕಾರಣಕ್ಕೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಮುಖ್ಯಮಂತ್ರಿಗಳು ನನಗೆ ಮೊದಲೇ ತಿಳಿಸಿದ್ದಾರೆ.– ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ