ಚಿಕ್ಕಮಗಳೂರು: ಅಕ್ರಮ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಜರಂಗ ದಳದ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ.
ಮತಾಂತರ ಸಂಬಂಧ ಚರ್ಚೊಂದರ ಪಾದ್ರಿಗಳು ಹಾಗೂ ನೂರಾರು ಜನರು ಸಭೆ ನಡೆಸುತ್ತಿದ್ದರು ಎನ್ನಲಾಗುತ್ತಿದ್ದು, ಈ ವೇಳೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಏಕಾಏಕಿ ದಾಳಿ ನಡೆಸಿದ್ದರಿಂದ ಅಲ್ಲಿದ್ದವರು ಗಾಬರಿಗೊಂಡಿದ್ದು, ಅನುಮತಿ ಇಲ್ಲದೆ ಸಭೆ ನಡೆಸಲಾಗುತ್ತಿದೆ. ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಕಾರ್ಯಕರ್ತರು, ಗ್ರಾಮೀಣ ಭಾಗದ ಜನರನ್ನು ಗುರಿಯಾಗಿಸಿಕೊಂಡು ಮತಾಂತರ ಮಾಡಲಾಗುತ್ತಿದೆ ಆರೋಪಿಸಿದ್ದಾರೆ.
ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೀದರ್ ನ ಏಳು ಜನರ ದುರ್ಮರಣ
ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.