Advertisement

2 ತಿಂಗಳೊಳಗೆ ಕಂದಾಯ ಗ್ರಾಮಗಳಾಗಿ ಪರಿವರ್ತನೆ: ಸಚಿವ ಅಶೋಕ್‌

08:56 PM Oct 17, 2022 | Team Udayavani |

ಬೆಂಗಳೂರು: ಡಿಸೆಂಬರ್‌ ಒಳಗೆ ಲಂಬಾಣಿ ತಾಂಡಾ, ಕುರುಬರ ಹಟ್ಟಿ ಹಾಗೂ ಕುಟುಂಬ ದಾಖಲೆ ಇಲ್ಲದವರನ್ನು ಗುರುತಿಸಿ ಹಕ್ಕು ಪತ್ರ ನೀಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

Advertisement

ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿಯವರ ವೀಡಿಯೋ ಕಾನ್ಫರೆನ್ಸ್‌ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸುಮಾರು 1.20 ಲಕ್ಷ ಜನರಿಗೆ ಹಕ್ಕು ಪತ್ರ ನೀಡುತ್ತೇವೆ. ಇದೊಂದು ಐತಿಹಾಸಿಕ ಕ್ರಮ. ಕಂದಾಯ ಗ್ರಾಮಗಳನ್ನಾಗಿ ಮಾಡಿ ಎಲ್ಲ ಸರಕಾರಿ ಸೌಲಭ್ಯ ಸಿಗುವಂತೆ ಮಾಡುತ್ತೇವೆ. ಈ ಪ್ರಕ್ರಿಯೆ ಈಗ ಜಾರಿಯಲ್ಲಿದೆ ಎಂದು ಹೇಳಿದರು.

ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಬಡವರು ಸರಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದಾರೆ. ಅದನ್ನು 94 ಸಿ, 94 ಸಿಸಿ ಅಡಿ ಸಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪೌತಿ ಖಾತೆಯ ಸಮಸ್ಯೆ ಬಗೆಹರಿಸಲು ಸರಕಾರ ಗಂಭೀರ ಚಿಂತನೆ ನಡೆಸಿದೆ. ಪೌತಿ ಖಾತೆಯಲ್ಲಿ ಸತ್ತವರ ಹೆಸರು ಮುಂದುವರಿಯುತ್ತಿತ್ತು. ಸತ್ತವರ ಹೆಸರನ್ನು ಕೈಬಿಟ್ಟು, ವಾರಸುದಾರರ ಹೆಸರು ಸೇರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಕೊಡುವ ಆಹಾರ ಗುಣಮಟ್ಟವನ್ನು ಕಾಲಕಾಲಕ್ಕೆ ಖುದ್ದಾಗಿ ಪರಿಶೀಲಿಸುವಂತೆ ಸೂಚಿಸಿದ್ದೇವೆ ಎಂದರು.

Advertisement

ರಾಜ್ಯಾದ್ಯಂತ ಮಳೆಯಾಗುತ್ತಿದ್ದು ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆಯಲ್ಲಿ ಸ್ವಲ್ಪವೂ ಲೋಪ ಆಗದಂತೆ ನೋಡಿಕೊಳ್ಳಬೇಕು. ಪೂರೈಕೆಗೆ ಸರಿಯಾದ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ರೈತರಿಗೆ ಯಾವ ಸಮಸ್ಯೆಯೂ ಆಗದಂತೆ ಸರಕಾರ ನೋಡಿಕೊಳ್ಳುತ್ತದೆ ಎಂದು ಹೇಳಿದರು.

ತರಬೇತಿ ಶಿಬಿರ
ಜಿಲ್ಲಾಧಿಕಾರಿಗಳಿಗೆ ತರಬೇತಿ ಶಿಬಿರ ನಡೆಸಲು ಯೋಚಿಸುತ್ತಿದ್ದೇವೆ. ಮೈಸೂರಿನ ಸುತ್ತೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಅವರಿಗೂ ಕೆಲಸ ಮಾಡಲು ಉತ್ಸಾಹ ಬರಲಿ ಎನ್ನುವ ಕಾರಣಕ್ಕೆ ಮಾಡುತ್ತಿದ್ದೇವೆ. 35 ಗಂಟೆಗಳ ಟ್ರೆ„ನಿಂಗ್‌ ಕ್ಯಾಂಪ್‌ ಇದಾಗಲಿದೆ. ಅವರಿಗೆ ಚರ್ಚೆ ಮಾಡಲು ಹೆಚ್ಚು ಅವಕಾಶ ನೀಡುತ್ತೇವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next