Advertisement
ಇಲ್ಲಿನ ಒಕ್ಕಲಿಗರ ಸಮಾಜದ ವತಿಯಿಂದ ಗುರುವಾರ ಆಯೋಜಿಸಿದ್ದ ಒಕ್ಕಲಿಗರ ಸಮುದಾಯ ಭವನದ ಉದ್ಘಾಟನೆಯನ್ನು ನಡೆಸಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಪ್ರತಿದಿನ ಸಾವಿರಾರು ಹಿಂದೂ ಕುಟುಂಬಗಳನ್ನು ಮತಾಂತರ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಮತಾಂತರ ತಡೆಗಟ್ಟುವ ನಿಟ್ಟಿನಲ್ಲಿ ಸ್ವಾಮಿಗಳು ನೇತೃತ್ವ ವಹಿಸಿ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು ಎಂದು ಮನವಿ ಮಾಡಿದರು.
Related Articles
Advertisement
ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಕೆಂಪೆಗೌಡ ವಿಮಾನ ನಿಲ್ದಾಣವೆಂದು ನಾಮಕರಣ ಮಾಡುವ ಮೂಲಕ ನಾಡು ನಿರ್ಮಾತ್ರನಿಗೆ ಗೌರವ ಸಲ್ಲಿಸಿದ್ದಾರೆ. ಜೊತೆಗೆ ವಿಮಾನ ನಿಲ್ದಾಣ ಪಕ್ಕದಲ್ಲಿ 108 ಅಡಿ ಎತ್ತರದ ಕೆಂಪೇಗೌಡ ಮೂರ್ತಿಯನ್ನು ನಿರ್ಮಿಸುತ್ತಿದ್ದು, ಜೂನ್ ತಿಂಗಳಿನಲ್ಲಿ ಅದು ಲೋಕಾರ್ಪಣೆಗೊಳ್ಳಲಿದೆ. ಒಕ್ಕಲಿಗ ಸಂಘಕ್ಕೆ ಖಾಸಗಿ ವಿಶ್ವವಿದ್ಯಾಲಯ ನೀಡಬೇಕು ಎಂದು ಶ್ರೀಗಳು ಮನವಿ ಮಾಡಿದ್ದು ಈ ಬಗ್ಗೆ ಸಹ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಬೇಕು. ಒಕ್ಕಲಿಗ ಸಮಾಜದ ಮಕ್ಕಳಿಗೆ ವಿದ್ಯಾಭ್ಯಾಸ ಸಮಸ್ಯೆ ಉಂಟಾದರೆ ಸಮುದಾಯ ಅವರ ಬೆನ್ನಿಗೆ ನಿಂತುಕೊಳ್ಳಬೇಕು. ಒಕ್ಕಲಿಗ ಸಮುದಾಯ ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವ ಜೊತೆಗೆ ಇತರೆ ಸಮುದಾಯಕ್ಕೂ ಕಣ್ಣಾಗಬೇಕು. ಕೀಳರಿಮೆ ಬೆಳೆಸಿಕೊಳ್ಳದೆ ಸಮುದಾಯದ ಸಂಘಟನೆಗೆ ಒತ್ತು ನೀಡಬೇಕು. ಸ್ವಾಭಿಮಾನದ ಜೊತೆ ಕಿಚ್ಚು, ಆತ್ಮವಿಶ್ವಾಸ, ಇತರರಿಗೆ ಗೌರವ ಕೊಡುವುದನ್ನು ನಮ್ಮ ಮಕ್ಕಳಿಗೆ ಕಲಿಸಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ಶಿವಮೊಗ್ಗ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಗರ್ತಿಕೆರೆ ಮಠದ ರೇಣುಕಾನಂದ ಸ್ವಾಮೀಜಿ, ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು, ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಪ್ರಮುಖರಾದ ಮಲ್ಲಿಕಾರ್ಜುನ ಹಕ್ರೆ, ಡಾ. ಅಂಜನಪ್ಪ, ಧರ್ಮೇಶ್, ಕೋನಪ್ಪ ರೆಡ್ಡಿ, ಮಧುರಾ ಶಿವಾನಂದ್, ಬಿ.ಎಚ್.ಲಿಂಗರಾಜ್ ಇನ್ನಿತರರು ಹಾಜರಿದ್ದರು. ಚಮತಿ ಪ್ರಾರ್ಥಿಸಿದರು. ಟಿ.ಬಸವರಾಜ್ ಸ್ವಾಗತಿಸಿದರು. ಎಂ.ಟಿ.ಗುಂಡಪ್ಪ ಗೌಡ ಪ್ರಾಸ್ತಾವಿಕ ಮಾತನಾಡಿದರು. ಲಕ್ಷ್ಮೀಕಾಂತ್ ನಿರೂಪಿಸಿದರು.