Advertisement

9th Parole; ಅಪರಾಧಿ ರಾಮ್ ರಹೀಮ್ ಗೆ ಮತ್ತೆ 50 ದಿನಗಳ ಪೆರೋಲ್!!

08:43 PM Jan 19, 2024 | Team Udayavani |

ಹೊಸದಿಲ್ಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಪ್ರಮುಖ ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ 50 ದಿನಗಳ ಪೆರೋಲ್ ನೀಡಲಾಗಿದೆ. ಈ ಹಿಂದೆ ನವೆಂಬರ್ 2023 ರಲ್ಲಿ 21 ದಿನಗಳ ಪೆರೋಲ್‌ನಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಕಳೆದ ವರ್ಷ ಮೂರು ಬಾರಿ ಪೆರೋಲ್ ನೀಡಲಾಗಿತ್ತು ಎಂಬುದು ಗಮನಾರ್ಹ ವಿಚಾರವಾಗಿದ್ದು, 4 ವರ್ಷಗಳಲ್ಲಿ 9 ನೇ ಪೆರೋಲ್ ಪಡೆದಿದ್ದು, ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Advertisement

ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಸಾವಿರಾರು ಅನುಯಾಯಿಗಳನ್ನು ಹೊಂದಿರುವ 56 ವರ್ಷದ ರಾಮ್ ರಹೀಮ್, ಅನಾರೋಗ್ಯದಿಂದ ಬಳಲುತ್ತಿರುವ ತನ್ನ ತಾಯಿಯನ್ನು ಭೇಟಿ ಮಾಡಲು ಮನವಿ ಸೇರಿದಂತೆ ವಿವಿಧ ಕಾರಣಗಳಿಗಾಗಿ ಹಲವಾರು ಬಾರಿ ಪೆರೋಲ್‌ನಲ್ಲಿ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ಶಿಷ್ಯರಯರಿಬ್ಬರ ಮೇಲೆ ಅತ್ಯಾಚಾರವೆಸಗಿದ್ದಕ್ಕಾಗಿ 2017 ರಲ್ಲಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು ನಂತರ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಮತ್ತು 2002 ರಲ್ಲಿ ಡೇರಾ ಮ್ಯಾನೇಜರ್ ರಂಜಿತ್ ಸಿಂಗ್ ಅವರ ಹತ್ಯೆಗಳು ಸೇರಿದಂತೆ ಎರಡು ಕೊಲೆ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಯನ್ನುನೀಡಲಾಗಿದೆ.

ಹರಿಯಾಣ ಉತ್ತಮ ನಡತೆ ಕೈದಿಗಳ (ತಾತ್ಕಾಲಿಕ ಬಿಡುಗಡೆ) ಕಾಯಿದೆ, 2022 ರ ಪ್ರಕಾರ, ಶಿಕ್ಷೆಗೊಳಗಾದ ಕೈದಿಗಳಿಗೆ ನಿಯಮಿತ ಪೆರೋಲ್ ನೀಡಬಹುದು. ಆದಾಗ್ಯೂ, ಬಹು ಕೊಲೆಗಳ ಅಪರಾಧಿ ಅಥವಾ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿಯಲ್ಲಿ ಶಿಕ್ಷೆಗೊಳಗಾದ ಕೈದಿಗಳು ಪೆರೋಲ್‌ಗೆ ಅರ್ಹರಾಗಿರುವುದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next