Advertisement

ಅಪರಾಧಿಗಳಂತೆ ನಡೆಸಿಕೊಂಡಿರುವುದು ಖಂಡನೀಯ: ಸಿಎಂ

11:32 PM Jul 10, 2019 | Team Udayavani |

ಬೆಂಗಳೂರು: “ಮುಂಬೈನಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಶಾಸಕರನ್ನು ಭೇಟಿ ಮಾಡಲು ಹೋದ ನನ್ನ ಸಹೋದ್ಯೋಗಿ ಡಿ.ಕೆ.ಶಿವಕುಮಾರ್‌, ಜಿ.ಟಿ.ದೇವೇಗೌಡರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳುವ ಮೂಲಕ ಮಹಾರಾಷ್ಟ್ರ ಸರ್ಕಾರ ವರ್ತಿಸಿದ ರೀತಿ ಖಂಡನೀಯ. ಜನಪ್ರತಿನಿಧಿಗಳನ್ನು ಬೀದಿಯಲ್ಲಿ ನಿಲ್ಲಿಸಿ, ಅಪರಾಧಿಗಳಂತೆ ನಡೆಸಿಕೊಂಡಿರುವುದು ಶಿಷ್ಟಾಚಾರದ ಉಲ್ಲಂಘನೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

“ವಿಧಾನಸೌಧದಲ್ಲಿ ಬಿಜೆಪಿ ಶಾಸಕರ ದುಂಡಾವರ್ತನೆಯ ನಡವಳಿಕೆ ಜಿಗುಪ್ಸೆ ಹುಟ್ಟಿಸುವಂತದ್ದು. ಕಾಂಗ್ರೆಸ್‌ ಮುಖಂಡರು ಶಾಸಕರೊಂದಿಗೆ ಚರ್ಚೆ ನಡೆಸುತ್ತಿದ್ದ ಸಮಯದಲ್ಲಿ ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ವರ್ತಿಸಿದ ರೀತಿ ವಿಧಾನಸೌಧಕ್ಕೆ ಅಷ್ಟೇ ಅಲ್ಲ. ಕರ್ನಾಟಕ ರಾಜಕಾರಣದ ಶ್ರೇಷ್ಠ ಪರಂಪರೆಗೂ ಮಸಿ ಬಳಿದಿದೆ’.

“ಇಡೀ ರಾಷ್ಟ್ರ ಗಮನಿಸುತ್ತಿದೆ ಎಂಬ ಪರಿವೆಯೂ ಇಲ್ಲದೆ, ಲಜ್ಜಾಹೀನರಾಗಿ ವರ್ತಿಸಿರುವುದು ಬೇಸರ ಉಂಟು ಮಾಡಿದೆ. ಇವರ ಅಧಿಕಾರದ ಹಪಾಹಪಿಯಿಂದ ನಡೆದ ಘಟನಾವಳಿಗಳಿಂದ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ನಗೆಪಾಟಲಿಗೀಡಾಗಿದೆ. ಬಿಜೆಪಿ ನಡೆಸುತ್ತಿರುವುದು ಪ್ರಜಾಪ್ರಭುತ್ವದ ರಾಜಕಾರಣವೋ ಅಥವಾ ದಮನಕಾರಿ ಮನೋಭಾವದ ವಿಕೃತ ಪ್ರದರ್ಶನವೋ’ ಎಂದು ಮುಖ್ಯಮಂತ್ರಿಯವರು ಕಿಡಿಕಾರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next