Advertisement

ರಾಯಚೂರು ಕೃಷಿ ವಿವಿಯಲ್ಲಿ 11ನೇ ಘಟಿಕೋತ್ಸವ : ರಾಜ್ಯಪಾಲರಿಂದ ಚಾಲನೆ

01:14 PM Nov 29, 2021 | Team Udayavani |

ರಾಯಚೂರು: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಡಾ.ಥಾವರಚಂದ್ ಗೆಹ್ಲೋಟ್ ಚಾಲನೆ ನೀಡಿದರು.

Advertisement

ಕೃಷಿ ವಿವಿಯ ಪ್ರೇಕ್ಷಾಗೃಹದಲ್ಲಿ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಚಾಲನೆ ನೀಡಲಾಯಿತು. ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು.ಈ ಬಾರಿ ವಿವಿಧ ವಿಭಾಗಗಳಲ್ಲಿ 24 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ಅದರಲ್ಲಿ ಎರಡು ನಗದು ಪುರಸ್ಕಾರಗಳು ಒಳಗೊಂಡಿವೆ.

ಇದನ್ನೂ ಓದಿ:ಬೆಳೆ ಹಾನಿಗೆ ಹೆಚ್ವಿನ ಅನುದಾನ ಒದಗಿಸಲು ಕೇಂದ್ರಕ್ಕೆ ಪತ್ರ: ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯ ಅತಿಥಿಗಳಾಗಿ ಐಸಿಎಆರ್ ಉಪನಿರ್ದೇಶಕ ಡಾ.ಬಿ.ಕೆ.ಸಿಂಗ್, ಕುಲಪತಿ ಡಾ.ಕೆ.ಎನ್.ಕಟ್ಟಿಮನಿ ಪಾಲ್ಗೊಂಡಿದ್ದರು. ಕೇರಳ ಮೂಲದ ಗೀತಿಕಾ, ಗಂಗಾವತಿಯ ರೇಖಾ ಹೆಚ್ಚು ಚಿನ್ನದ ಪದಕ ಪಡೆದು ಗಮನ ಸೆಳೆದರು.

Advertisement

Udayavani is now on Telegram. Click here to join our channel and stay updated with the latest news.

Next