ಸುಬ್ರಹ್ಮಣ್ಯ: ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಘಟನೆ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಫೆ.9ರ ಗುರುವಾರ ಬೆಳಿಗ್ಗೆ ನಡೆದಿದೆ.
ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ವ್ಯಕ್ತವಾಗಿದೆ.
ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪುತ್ತೂರಿನಿಂದ ಹಾಗೂ ಸುಳ್ಯದಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ.
ತಕ್ಷಣವೇ ಕಾರ್ಯಪ್ರವೃತ್ತಗೊಂಡ ಅನಿಲ ಕಂಪೆನಿಯು ಎಮರ್ಜೆನ್ಸಿ ರೆಸ್ಪಾನ್ಸ್ ತಂಡವನ್ನು ಸ್ಥಳಕ್ಕೆ ಕಳುಹಿಸಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ ಎಂದು ತಿಳಿದುಬಂದಿದೆ.
ಇಲ್ಲಿನ ರೈಲು ನಿಲ್ದಾದಲ್ಲಿ ಕಳೆ ಡಿಸೆಂಬರ್(2022) ತಿಂಗಳಲ್ಲೂ ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಕೊಂಡ ಘಟನೆಯೂ ನಡದಿತ್ತು. ಲೋಕೋಪೈಲಟ್ ಅವರ ಸಮಯಪ್ರಜ್ಞೆಯಿಂದ ಸಂಭಾವ್ಯ ಅಪಾಯ ಅಂದು ತಪ್ಪಿತ್ತು.