ಬೆಳ್ಮಣ್: ಎಪ್ರಿಲ್ 1ರಂದು ಎಲ್ಲಡೆ ಮೋಜಿಗಾಗಿ ಜನ ಮೂರ್ಖರ ದಿನವನ್ನು ಆಚರಿಸಿದರೆ ನಂದಳಿಕೆ ಅಬ್ಬನಡ್ಕದ ಜಿಲ್ಲಾ ಅತ್ಯುತ್ತಮ ಯುವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ “ಎಪ್ರಿಲ್ ಫೂಲ್’ ಆಗ್ಬೇಡಿ ಬನ್ನಿ ಪರಿಸರವನ್ನು “ಕೂಲ್’ ಮಾಡುವ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಿ ಮೆಚ್ಚುಗೆಗೆ ಪಾತ್ರವಾಗಿದೆ.
ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ರಾಜೇಶ್ ಕೋಟ್ಯಾನ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಉಡುಪಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ ಹೋಬಳಿ ಘಟಕದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಸಾಪ ಬೆಳ್ಮಣ್ ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಫ್ರೆಂಡ್ಸ್ ಕ್ಲಬ್‌ನ ಕೋಶಾಧಿಕಾರಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ಉಪಸ್ಥಿತರಿದ್ದರು.