Advertisement
ಜಿಲ್ಲೆಯ ಶಿಡ್ಲಘಟ್ಟದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯನ್ನು ಕ್ಲೀನ್ ಅಂಡ್ ಗ್ರೀನ್ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆಯಲ್ಲಿಶೇಖರಣೆಯಾಗುವ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಗೊಳಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಜೊತೆಗೆ ಕಸದಿಂದ ರಸ ಮಾಡುವ ಯೋಜನೆ ಸಹ ರೂಪಿಸಲಾಗಿದ್ದು, ನಾಗರಿಕರು ರಸ್ತೆ ಬದಿಯಲ್ಲಿ ಅಥವಾ ಎಲ್ಲೆಂದರಲ್ಲೇ ಕಸ ಎಸೆದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
Related Articles
Advertisement
ಚಿಕ್ಕಬಳ್ಳಾಪುರ: ವಿದ್ಯಾರ್ಥಿ ಜೀವನದಲ್ಲಿ ಪ್ರಾಮಾಣಿಕವಾಗಿ ಓದುವ ಅಭ್ಯಾಸ ಮುಂದುವರಿಸಿದಾಗ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸುತ್ತದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗೇಟ್ ಬಳಿ ಬಿಜಿಎಸ್ ಸ್ಕೂಲ್ ಮತ್ತು ಪಿಯುಸಿ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ 2019-20 ನೇ ಸಾಲಿನ ಎಸ್‌ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜವಾಬ್ದಾರಿ ಹೆಚ್ಚಿಸಿದೆ: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಜಿಲ್ಲೆಯು ರಾಜ್ಯದ ಗಮನ ಸೆಳೆಯುವಂತೆ ಮಾಡಿರುವುದರಲ್ಲಿ ಜಿಲ್ಲಾಡಳಿತದ ಪಾತ್ರಕ್ಕಿಂತ ವಿದ್ಯಾರ್ಥಿ ಹಾಗೂ ಶಿಕ್ಷಕ ವೃಂದದ ಪಾತ್ರ ಹೆಚ್ಚಿದೆ. ಇದು ಹೆಮ್ಮೆಯ ಸಂಗತಿ ಜೊತೆಗೆ ಜವಾಬ್ದಾರಿಯೂ ಹೆಚ್ಚಿಸಿದೆ ಎಂದರು. ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಒಬ್ಬ ವ್ಯಕ್ತಿಯ ಜೀವನದ ಏಳುಬೀಳುಗಳಿಗೆ ಮೂಲಾಧಾರವೇ ಪ್ರೌಢ ಶಾಲಾ ಶಿಕ್ಷಣವಾಗಿದೆ. ಇಲ್ಲಿ ಯಾರು ಜೀವನದಲ್ಲಿ ಎದು ರಾಗುವ ಸಮಸ್ಯೆಗಳನ್ನು ನಿವಾರಿಸಿಕೊಂಡು ಯಶಸ್ವಿಯಾಗಿ ಮುನ್ನುಗ್ಗುತ್ತಾರೋ ಅವರ ಭವಿಷ್ಯ ಉಜ್ವಲವಾಗಿರುತ್ತದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಉತ್ತಮ ಸಾಧನೆ ತೋರಿ ರಾಜ್ಯಕ್ಕೆ ಮೊದಲ ಸ್ಥಾನಗಳಿಸಿರುವುದು ಸಂತೋಷದ ವಿಷಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ
ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ ಮಾಡಲಾಯಿತು. ಬಿಜಿಎಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಮಹದೇವಯ್ಯ, ಶಿಕ್ಷಣಸಂಯೋಜಕ ಭಾಸ್ಕರಗೌಡ, ತಹಶೀಲ್ದಾರ್ ಅರುಂಧತಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ದೇವರಾಜ್, ಶಿಕ್ಷಕ ವೆಂಕಟರೆಡ್ಡಿ, ಮಂಜುನಾಥ್‌ರೆಡ್ಡಿ ಇದ್ದರು.