ಗಂಗೊಳ್ಳಿ: ಪ್ರತಿಯೊಬ್ಬರಲ್ಲೂ ಸ್ವತ್ಛತೆ ಅರಿವು ಮೂಡಬೇಕು.ನಮ್ಮ ಮನೆಯಿಂದಲೇ ಸ್ವತ್ಛತೆ ಎಂಬ ಭಾವನೆ ಜನರಲ್ಲಿ ಬೆಳೆಸಬೇಕು. ಮನೆ, ಪರಿಸರ ಸ್ವತ್ಛತೆ ಕಾಪಾಡಿದರೆ ಮಾತ್ರ ಅನೇಕ ಸಾಂಕ್ರಾಮಿಕ ರೋಗಗಳನ್ನು ದೂರ ಮಾಡಲು ಸಾಧ್ಯ. ಶೂನ್ಯ ಮಲೇರಿಯಾ ನನ್ನಿಂದಲೇ ಆರಂಭ ಎನ್ನುವ ಘೋಷವಾಕ್ಯ ಅರ್ಥಪೂರ್ಣವಾಗಿದ್ದು, ಮಲೇರಿಯಾ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಗಂಗೊಳ್ಳಿ ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅವರು ಹೇಳಿದರು.
ಉಡುಪಿ ಜಿ. ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ರಾಷ್ಟ್ರೀಯ ರೋಗವಾಹಕಾಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ ಉಡುಪಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ. ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಲೇರಿಯಾ ಮಾಸಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮೀ ಮಾಹಿತಿ ನೀಡಿದರು.ಸರಸ್ವತಿ ವಿದ್ಯಾಲಯದ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲ ಉಮೇಶ ಕಾರ್ಣಿಕ್, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್, ಗ್ರಾ.ಪಂ. ಸದಸ್ಯ ಬಿ.ರಾಘವೇಂದ್ರ ಪೈ ಮತ್ತಿತರರು ಉಪಸ್ಥಿತರಿದ್ದರು.
ಕಿರಿಯ ಆರೋಗ್ಯ ಸಹಾಯಕಿ ಪ್ರಜ್ವಲಾ ಸ್ವಾಗತಿಸಿ, ಆಶಾ ಕಾರ್ಯಕರ್ತೆ ಕಲ್ಪನಾ ವಂದಿಸಿದರು.