Advertisement

ಅಭಿವೃದ್ಧಿಗೆ ಪಕ್ಷಾತೀತವಾಗಿ ಸಹಕಾರ

08:52 AM Aug 11, 2020 | Suhan S |

ಮಾಲೂರು: ಜಿಲ್ಲೆಯ ನಗರ, ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪಕ್ಷಾತೀತವಾಗಿ ಸಹಕಾರ ನೀಡಲಾಗುವುದು. ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಅನುದಾನ ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಕಾಮಗಾರಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಸಲಹೆ ನೀಡಿದರು.

Advertisement

ಪಟ್ಟಣದ ಕೃಷ್ಣಪ್ಪ ಬಡಾವಣೆಯಲ್ಲಿ ಎಸ್‌ಎಫ್‌ಸಿಯಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಮಾಲೂರು ಬೆಂಗಳೂರು ನಗರಕ್ಕೆ ಸಮೀಪದಲ್ಲಿದ್ದು, ವೇಗವಾಗಿ ಬೆಳೆಯುತ್ತಿದೆ. ಮೂಲ ಸೌಕರ್ಯ ಒದಗಿಸಲು ಹೆಚ್ಚಿನ ಅನುದಾನದ ಅಗತ್ಯವಿದೆ. ಹೀಗಾಗಿ ಕೋವಿಡ್ ಸಂಕಷ್ಟದ ನಡುವೆಯೂ ಸಿಎಂ ಎಸ್‌ಎಫ್‌ಸಿ ವಿಶೇಷ ಅನುದಾನದಡಿ 7.5 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದರು

ಸಂಸದ ಎಸ್‌.ಮುನಿಸ್ವಾಮಿ ಮಾತನಾಡಿ, ಮುಂದಿನ ದಿನಗಳಲ್ಲಿ ಪುರಸಭೆಗೆ 15ನೇ ಹಣಕಾಸು ಯೋಜನೆಯಡಿ ಅನುದಾನ ಬಿಡುಗಡೆ ಆಗಲಿದ್ದು, ಇಲ್ಲಿನ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪಕ್ಷಾತೀತವಾಗಿ ಪಟ್ಟಣದ ಅಭಿವೃದ್ಧಿಗೆ ಅನುದಾನ ನಿಗದಿ ಪಡಿಸಲಾಗುವುದು ಎಂದರು. ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಪಕ್ಷಾತೀತವಾಗಿ ಪಟ್ಟಣದ ಅಭಿವೃದ್ಧಿಗೆ ಎಸ್‌ಎಫ್‌ಸಿ ಅನುದಾನ ಬಿಡುಗಡೆ ಮಾಡಿದ ಸಿಎಂಗೆ ಅಭಿನಂದನೆ ತಿಳಿಸಿದರು.

ಉಪವಿಭಾಗಾಧಿಕಾರಿ ವಿ.ಸೋಮಶೇಖರ್‌, ಯೋಜನಾ ನಿರ್ದೇಶಕ ರಂಗಸ್ವಾಮಿ, ತಹಶೀಲ್ದಾರ್‌ ಮಂಜುನಾಥ್‌, ಮುಖ್ಯಾಧಿಕಾರಿ ಪ್ರಸಾದ್‌, ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ್‌, ಪಿಕಾರ್ಡ್‌ ಬ್ಯಾಂಕ್‌ ನಿರ್ದೇಶಕ ಎಟ್ಟಕೋಡಿ ಕೃಷ್ಣಾರೆಡ್ಡಿ, ರಾಘವೇಂದ್ರ, ಅಭಿಯಂತರ ಮಂಜುನಾಥ್‌, ಪುರಸಭೆ ಸಿಎಒ ಮಂಜುನಾಥ್‌, ಲೆಕ್ಕಾಧಿಕಾರಿ ಮಲ್ಲೇಶ್‌, ಕಂದಾಯ ಅಧಿಕಾರಿ ರೇಣುಕಾ, ಕಂದಾಯ ನಿರೀಕ್ಷಕ ಮುನಿರಾಜು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next