ಮಳವಳ್ಳಿ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾ ರದ ಜೊತೆಗೆ ಸಾರ್ವಜನಿಕರು ಕೈಜೋಡಿಸುತ್ತಿರುವ ಶಾಲೆಗಳ ಬೆಳವಣಿಗೆ ಉತ್ತಮ ವೇದಿಕೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ ಅಭಿಪ್ರಾಯಪಟ್ಟರು.
ತಾಲೂಕಿನ ಹಿಟ್ಟನಹಳ್ಳಿಕೊಪ್ಪಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರಿ ಶಾಲೆ ಗಳ ಬಲವರ್ಧನೆಗಾಗಿ ಕಲಿಕಾ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿದೆ ಪ್ರತಿಭೆ: ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಲ್ಲಿ ಅಗಾಧವಾದ ಪ್ರತಿಭೆಯಿದ್ದು, ಗ್ರಾಮದ ಸರ್ಕಾರಿ ಶಾಲೆಯನ್ನು ಮತ್ತೂಮ್ಮೆ ಮಾದರಿ ಶಾಲೆಯನ್ನಾಗಿ ಮಾಡಲು ಹಾಗೂ ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಪ್ರತಿಯೊಬ್ಬರು ಸಹಕಾರ ನೀಡಿದ್ದರೆ, ವಿದ್ಯಾರ್ಥಿಗಳು ನಮ್ಮ ನಿರೀಕ್ಷೆಗೂ ಮೀರಿ ಸಾಧನೆ ಮಾಡಲಿದ್ದಾರೆ.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬೇಕಾದ ಸೌಲಭ್ಯಗಳನ್ನು ಸರ್ಕಾರ ನೀಡಲಿದೆ. ಅದರ ಜತೆಗೆ ಪೋಷಕರು ಹಾಗೂ ದಾನಿಗಳು ನೆರವು ಸಹಕಾರ ನೀಡಬೇಕು ಎಂದರು. ಉತ್ತಮ ಬದುಕು ಕಟ್ಟಿಕೊಳ್ಳಿ: ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನ ಜಾರಿ ಯಾದ ದಿನವನ್ನು ಗಣರಾಜೋತ್ಸವವಾಗಿ ಆಚರಿಸ ಲಾಗುತ್ತಿದ್ದು, ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡರೆ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದು ಹೇಳಿದರು.
ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ: ಆಶಾ ಕಿರಣ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಶಿವಶಂಕರಯ್ಯ ಮಾತನಾಡಿ, ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿ ಬಡತನದಲ್ಲೂ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಾರೆ. ಕೆಲ ಶಿಕ್ಷಣ ಸಂಸ್ಥೆಗಳು ಹಣ ಸುಲಿಗೆ ಮಾಡುತ್ತಿದ್ದು, ಸರ್ಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡು ತ್ತಿವೆ ಎಂದರು.
ಇದನ್ನೂ ಓದಿ:ಯೋಗಿ ಆದಿತ್ಯನಾಥರಂತೆ ಸುತ್ತೂರು ಶ್ರೀಗಳನ್ನು ಸಿಎಂ ಮಾಡಿ! ರೈತ ಹಿತರಕ್ಷಣಾ ಸಮಿತಿ ಒತ್ತಾಯ
ಶಾಲಾ ಮಕ್ಕಳಿಗೆ ಟೀಷರ್ಟ್, ಟೈ, ಬೆಲ್ಟ್ ಹಾಗೂ ಮಾಸ್ಕ್ಗಳನ್ನು ವಿತರಿಸಲಾಯಿತು. ಗಣಕಯಂತ್ರದ ಕೊಠಡಿಯನ್ನು ಕ್ಷೇತ್ರ ಶಿಕ್ಷಣಾಧಿ ಕಾರಿ ಚಿಕ್ಕಸ್ವಾಮಿ ಉದ್ಘಾಟಿಸಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಯ ಪ್ರಕಾಶ್, ಗ್ರಾಪಂ ಸದಸ್ಯರಾದ ವಿರೇಶ್, ಪ್ರದೀಪ್, ಚಿಕ್ಕಣ್ಣಶೆಟ್ಟಿ, ಜಯರಾಮು, ರೂಪ, ರಜಿನಿ, ಪಿಡಿಓ ಸಿದ್ದರಾಜು, ಎಸ್‌ಡಿಎಂಸಿ ಅಧ್ಯಕ್ಷ ಪುಟ್ಟರಾಜು, ಶಿವ ಪ್ರಸಾದ್, ಶೀಲಾ, ನೇತ್ರಾವತಿ, ಮಹೇಶ್, ಸಿಆರ್‌ಪಿ ಭಗವಾನ್, ನಿವೃತ್ತ ಮುಖ್ಯ ಶಿಕ್ಷಕ ನಟರಾಜು, ಪ್ರಭಾರಿ ಮುಖ್ಯಶಿಕ್ಷಕ ಉಮೇಶ್, ಶಿಕ್ಷಕರಾದ ಎಂ. ಡಿ.ವೆಂಕಟೇಶ್, ಪಂಕಜವಲ್ಲಿ, ಬಸವರಾಜು ಸೇರಿದಂತೆ ಹಲವರು ಇದ್ದರು.