Advertisement

ಗ್ರಾಮಗಳ ಅಭಿವೃದ್ಧಿಗೆ ಸಹಕಾರ ಅಗತ್ಯ

06:06 AM Jul 01, 2020 | Lakshmi GovindaRaj |

ಮಳವಳ್ಳಿ: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಆಡಳಿತ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಹೊಂದಾಣಿಕೆಯಿಂದ ಸಾರ್ವಜನಿಕ ಕೆಲಸ ನಿರ್ವಹಿಸಿದರೆ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಡಾ.ಕೆ.ಅನ್ನದಾನಿ  ಹೇಳಿದರು. ತಾಲೂಕಿನ ಹಿಟ್ಟನಹಳ್ಳಿ ಗ್ರಾಪಂನಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿರುವ ರಾಜೀವ್‌ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

Advertisement

ಹಳ್ಳಿಗಳು ಸಾಕಷ್ಟು ಪ್ರಗತಿ ಕಾಣಬೇಕು. ಹೀಗಾಗಿ ಅಧಿಕಾರಿಗಳು ಹಾಗೂ ಸದಸ್ಯರ ನಡುವೆ ಅನ್ಯೋನ್ಯತೆ ಇರಬೇಕು. ಸಣ್ಣಪುಟ್ಟ ಸಮಸ್ಯೆಗಳ ಪರಿಹಾರಕ್ಕೆ ಶಾಸಕರಿಗೆ ಪೋನ್‌ ಮಾಡುತ್ತಾರೆ. ಸರ್ಕಾರಿ ಕಚೇರಿಗಳಿಗೆ ಸ್ವಂತ ಕಟ್ಟಡಗಳು ಇದ್ದರೆ ಹಲವು  ಯೋಜನೆಗಳನ್ನು ಬಳಸಿಕೊಂಡು ಅಭಿವೃದ್ಧಿ ಮಾಡಬಹುದು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೇ ಕೆಲಸ ಮಾಡಿ ಎಂದು ಗ್ರಾಪಂ ಸದಸ್ಯರಿಗೆ ಕಿವಿ ಮಾತು ಹೇಳಿದರು.

ಈ ವೇಳೆ ಹಸಿ ಮತ್ತು ಒಣ ಕಸ ವಿಂಗಡಣೆಗೆ  ಗ್ರಾಮಸ್ಥರಿಗೆ ಕಸದ ಬುಟ್ಟಿಗಳನ್ನು ಶಾಸಕರು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ಎಚ್‌.ಎಸ್‌.ರೇಖಾ ವಹಿಸಿದರು. ಜಿಪಂ ಸದಸ್ಯ ಹನುಮಂತು, ತಾಪಂ ಇಒ ಬಿ.ಎಸ್‌.ಸತೀಶ್‌, ತಾಪಂ ಉಪಾಧ್ಯಕ್ಷ ಸಿ.ಮಾಧು,  ಪುರಸಭೆ ಸದಸ್ಯ ನಂದಕುಮಾರ್‌, ತಾಪಂ ಸದಸ್ಯ ಪುಟ್ಟಸ್ವಾಮಿ, ಗ್ರಾಪಂ ಉಪಾಧ್ಯಕ್ಷ ಕೆ.ಸ್ವಾಮಿ, ಸದಸ್ಯರಾದ ಪ್ರಮೋದ್‌, ಪುಟ್ಟರಾಜು, ಶಿವಕುಮಾರ್‌, ಕನ್ಯಾಕುಮಾರಿ, ಗೀತಾ, ಸವಿತ, ಉಮೇಶ್‌, ನಂದಿನಿ, ಸುನಂದಮ್ಮ, ಕಿರುಗಾವಲು  ಪಿಎಸ್‌ಐ ಮಲ್ಲಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next