Advertisement

ಮೀಸಲು ಹೆಚ್ಚಳಕ್ಕೆ ಅಗತ್ಯ ಸಹಕಾರ: ಸಚಿವ ಪ್ರಹ್ಲಾದ ಜೋಷಿ

11:45 PM Oct 09, 2022 | Team Udayavani |

ಹುಬ್ಬಳ್ಳಿ: ಮೀಸಲಾತಿ ಹೆಚ್ಚಿಸುವ ಮೂಲಕ ರಾಜ್ಯ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಬಿಜೆಪಿ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಪರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಯಾವಾಗಲೂ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಮತ ಪಡೆದು ಅಧಿಕಾರ ಅನುಭವಿ ಸಿದೆ. ಅವರ ಕಲ್ಯಾಣದ ಬಗ್ಗೆ ಯಾವುದೇ ಕಾರ್ಯ ಗಳನ್ನು ಮಾಡಿಲ್ಲ ಎಂದರು.

ಇನ್ನೂ ಕೆಲವು ಸಮುದಾಯಗಳಿಗೆ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಭರವಸೆ ನೀಡಿದ್ದು, ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ. ಕಾನೂನು ರೀತಿಯಲ್ಲಿ ಏನು ಮಾಡಬೇಕು ಎಂಬುದನ್ನು ರಾಜ್ಯ ಸರಕಾರ ಪರಿಶೀಲಿಸಲಿದ್ದು, ಕೇಂದ್ರ ಸರಕಾರ ಸಹಕಾರ ನೀಡಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next