Advertisement

ಕೋವಿಡ್ ತಡೆಗೆ ಸ್ಥಳೀಯ ಸಂಸ್ಥೆ ಸದಸ್ಯರ ಸಹಕಾರ ಅಗತ್ಯ

07:40 AM Jun 13, 2020 | Team Udayavani |

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್‌-19 ಹರಡುವಿಕೆ ತಡೆ ನಿಟ್ಟಿನಲ್ಲಿ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರ ಸಹಕಾರ ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಹೇಳಿದರು.

Advertisement

ಯಾದಗಿರಿ ನಗರಸಭೆಯಲ್ಲಿ ಬುಧವಾರ ಕೋವಿಡ್‌19 ಮುಂಜಾಗ್ರತೆ ಕ್ರಮ ಹಾಗೂ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೈಗೊಂಡ ನಿಯಂತ್ರಣ ಮತ್ತು ಚಿಕಿತ್ಸೆ ಬಗ್ಗೆ ನಗರಸಭೆ ಸದಸ್ಯರಿಗೆ ಹಮ್ಮಿಕೊಂಡಿದ್ದ ತರಬೇತಿ ಮತ್ತು ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೌರ ಕಾರ್ಮಿಕರಿಗೆ ಸ್ವಯಂ ರಕ್ಷಣೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟೈಸ್‌ ಮಾಡುವ ಕುರಿತು ತಿಳಿಸಬೇಕು. ತಮ್ಮ ವಾರ್ಡ್‌ಗಳಲ್ಲಿ ಗೃಹ ದಿಗ್ಬಂಧನದಲ್ಲಿರುವ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾವಹಿಸಬೇಕು. ಅವರು ಮನೆಯಿಂದ ಹೊರಬಂದ ಪಕ್ಷದಲ್ಲಿ ತಕ್ಷಣವೇ ಸಂಬಂ ಧಿಸಿದ ಸ್ಥಳೀಯ ಸಂಸ್ಥೆಗೆ ಮಾಹಿತಿ ನೀಡಬೇಕು. ಯಾವುದೇ ವ್ಯಕ್ತಿ ನೆಗಡಿ, ಕೆಮ್ಮು, ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿರುವುದು ಕಂಡುಬಂದಲ್ಲಿ ತಕ್ಷಣವೇ ಆರೋಗ್ಯ ಸಿಬ್ಬಂದಿಗೆ ತಿಳಿಸಲು ಕೋರಿದರು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದವರಿಗೆ 100 ರೂ. ದಂಡ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಂಡುಬಂದಲ್ಲಿ 150 ರೂ. ದಂಡ, ಅಂಗಡಿ ಮುಂಗಟ್ಟುಗಳಲ್ಲಿ ಸಾರ್ವಜನಿಕ ಅಂತರ ಕಾಯ್ದುಕೊಳ್ಳುವಲ್ಲಿ ವಿಫಲವಾದಲ್ಲಿ 1000 ರೂ. ದಂಡ ವಿಧಿಸಲಾಗುವುದು ಹಾಗೂ ವ್ಯಾಪರಸ್ಥರ ಪರವಾನಗಿ ರದ್ದುಪಡಿಸಲಾಗುವುದು. ವ್ಯಾಪಾರಸ್ಥರಿಂದ ಮೇಲಿನ ಎಲ್ಲ ನಿಯಮಗಳನ್ನು ಪಾಲಿಸುವ ಕುರಿತು ಅಫಿಡೆವಿಟ್‌ ಪಡೆಯಬೇಕು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next