Advertisement

ಅಭಿವೃದ್ದಿಗೆ ಅಧಿಕಾರಿಗಳ ಸಹಕಾರ ಅಗತ್ಯ

06:03 PM Jan 11, 2022 | Shwetha M |

ಚಡಚಣ: ರಾಜ್ಯದಲ್ಲಿ ಒಮಿಕ್ರಾನ್‌ ಹೆಚ್ಚುತ್ತಿರುವ ಸಂದರ್ಭದಲ್ಲಿ ಜನರ ಆರೋಗ್ಯದ ಜೊತೆಗೆ ಮತಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಬೇಕಾದ ಅನಿವಾರ್ಯತೆಯಿದ್ದು ಇದಕ್ಕೆ ಅಧಿಕಾರಿಗಳ ಸಹಕಾರ ಅಗತ್ಯ ಎಂದು ಶಾಸಕ ದೇವಾನಂದ ಚವ್ಹಾಣ ಹೇಳಿದರು.

Advertisement

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎರಡನೇ ಅಲೆಯಲ್ಲಿ ನಮ್ಮ ಸಂಬಂಧಿಕರನ್ನು, ಪ್ರಾಮಾಣಿಕ ಅಧಿಕಾರಿಗಳನ್ನು ಕಳೆದುಕೊಂಡಿದ್ದೇವೆ. ರಾಜ್ಯದಲ್ಲಿ ಪ್ರಾರಂಭವಾದ ಮೂರನೇ ಅಲೆಯನ್ನು ಬಹಳ ಜಾಣ್ಮೆಯಿಂದ ಎದುರಿಸಬೇಕಾಗಿದೆ ಎಂದು ಅವರು, ದೇಶದ ಬೆನ್ನೆಲುಬಾಗಿ ನಿಲ್ಲಬೇಕಾದ ಕೃಷಿ ಇಲಾಖೆ ಅಧಿಕಾರಿಗಳು ಹಣದ ಆಸೆಗೆ ಕಚೇರಿಗಳಿಗೆ ಸುಖಾ ಸುಮ್ಮನೆ ರೈತರನ್ನು ಅಲೆದಾಡಿಸಬೇಡಿ ಎಂದರು.

ವಿವಿಧ ಇಲಾಖೆಗಳಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು ಮಾರ್ಚ್‌ ತಿಂಗಳೊಳಗಾಗಿ ಪೂರ್ಣಗೊಳಿಸಬೇಕು. ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ನೀಡಬೇಕು. ಪಟ್ಟಣ ಸೇರಿದಂತೆ ತಾಲೂಕಿನಲ್ಲಿನ ದಾಬಾಗಳಲ್ಲಿ ಅವ್ಯಾಹತವಾಗಿ ನಡೆದಿರುವ ಅಕ್ರಮ ಚಟುವಟಿಕೆಗಳಿಗೆ ಅಬಕಾರಿ ಇಲಾಖೆ ಅಕಾರಿಗಳು ಕಡಿವಾಣ ಹಾಕಬೇಕು. ಕಟ್ಟಡ ಕಾರ್ಮಿಕ ಇಲಾಖೆಯಲ್ಲಿ ಶೇ. 50 ಯೋಜನೆಗಳು ಮೂಲಭೂತ ಸೌಲಭ್ಯ ಇಲ್ಲದವರಿಗೆ ಮುಟ್ಟುತ್ತಿವೆ. ಕೋವಿಡ್‌ ಮುಗಿದ ತಕ್ಷಣ ಪಂಚಾಯ್ತಿ ಮಟ್ಟದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸಭೆ ಆಯೋಜಿಸಿ ಅರ್ಹ ಕಾರ್ಮಿಕ ಫಲಾನುಭವಿಗಳಿಗೆ ಯೋಜನೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಎಚ್ಚರಿಸಿದರು.

ತಹಶೀಲ್ದಾರ್‌ ಸುರೇಶ ಚವಲರ, ತಾಪಂ ಆಡಳಿತಾಧಿಕಾರಿ ಬಸವರಾಜ ಬಿರಾದಾರ, ಇಒ ಸಂಜೀವ ಖಡಗೇಕರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next