Advertisement

ಪೋಕ್ಸೋ ಪ್ರಕರಣದ ಆರೋಪಿಗೆ ಸಹಕಾರ; ಸರ್ಕಾರಿ ಅಭಿಯೋಜಕಿ ಲೋಕಾಯುಕ್ತ ಬಲೆಗೆ

05:17 PM Feb 05, 2023 | Team Udayavani |

ದಾವಣಗೆರೆ: ಪೋಕ್ಸೋ ಪ್ರಕರಣದ ಆರೋಪಿಗೆ ಸಹಕರಿಸುವ ವಾಗ್ದಾನ ಮಾಡಿ ಅದಕ್ಕೆ ಪ್ರತಿಯಾಗಿ ಚೆಕ್ ರೂಪದಲ್ಲಿ 1.87 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವಿಶೇಷ ಸರ್ಕಾರಿ ಅಭಿಯೋಜಕಿ ಭಾನುವಾರ ಬೆಳಗ್ಗೆ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ.

Advertisement

ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕಿ ರೇಖಾ ಎಸ್.ಕೋಟೆಗೌಡರ್ ಸಿಕ್ಕಿಬಿದ್ದವರು. ದಾವಣಗೆರೆ ತಾಲೂಕಿನ ಕಿತ್ತೂರು ಗ್ರಾಮದ ಜಿ.ಟಿ.ಮದನ ಕುಮಾರ್ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧದ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಆರೋಪಿಗೆ ಸಹಾಯ ಮಾಡಲು ರೇಖಾ 3ಲಕ್ಷ ರೂಪಾಯಿಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ ಈಗಾಗಲೇ 1.17ಲಕ್ಷ ರೂಪಾಯಿ ಹಣವನ್ನು ಪಡೆದಿದ್ದು, ಉಳಿದ 1.87 ಲಕ್ಷ ರೂಪಾಯಿ ಹಣದ ಚೆಕ್‍ನ್ನು ತಮ್ಮ ದಾವಣಗೆರೆ ನಿವಾಸದಲ್ಲಿ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೇಖಾ ಅವರನ್ನು ವಶಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next