Advertisement
ಈ ವರ್ಷ 7 ಕಡೆ ಸಪ್ತಾಹ ನಡೆಸಲಾಗುತ್ತಿದ್ದು, ನ.14ರಂದು ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಪ್ತಾಹ ಉದ್ಘಾಟಿಸಿ, “ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಗೃಹ ಮತ್ತು ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದು, ಸಚಿವರಾದ ವಿ.ಸೋಮಣ್ಣ, ಜೆ.ಸಿ.ಮಾಧುಸ್ವಾಮಿ ಪಾಲ್ಗೊಳ್ಳಲಿದ್ದಾರೆ.
Related Articles
Advertisement
ಈ ಬಾರಿಯ ಸಪ್ತಾಹದಲ್ಲಿ ರಾಜ್ಯದ ಜನರ ಸಮಸ್ಯೆಗಳನ್ನು ಸರ್ಕಾರದ ಮುಂದಿಡಲಾಗುವುದು. ಪ್ರಮುಖವಾಗಿ ಆರೋಗ್ಯ ಸೇವೆಯಲ್ಲಿ ಚಾಲ್ತಿಯಲ್ಲಿರುವ “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ದಲ್ಲಿ ರೈತರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಸುಲಭವಾಗಿ ಸೌಲಭ್ಯ ಲಭ್ಯವಾಗುತ್ತಿಲ್ಲ. ಜತೆಗೆ, ಕೆಲ ತಾಂತ್ರಿಕ ತೊಡಕು ಉಂಟಾಗುತ್ತಿದೆ. ಹೀಗಾಗಿ, ಈ ಹಿಂದೆ ಇದ್ದ ಜನಸ್ನೇಹಿ ಯಶಸ್ವಿನಿ ಯೋಜನೆಯನ್ನೇ ಪುನಾರಂಭಿಸಬೇಕು ಎಂದು ಒತ್ತಾಯಿಸಲಾಗುತ್ತದೆ ಎಂದರು.
ರೈತ ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಅಕಾಲಿಕ ಮರಣ ಹೊಂದಿದ ರೈತರ 25,000 ರೂ.ನಿಂದ 1 ಲಕ್ಷ ರೂ.ವರೆಗೂ ಸಾಲ ಮನ್ನಾ ಮಾಡುವ ಯೋಜನೆ ಹಮ್ಮಿಕೊಂಡಿದೆ. ಈವರೆಗೆ 5,317 ಮೃತ ರೈತರಿಗೆ 15.50 ಕೋಟಿ ರೂ.ಸಾಲ ಮನ್ನಾ ಮಾಡಿದೆ. ಈ ಯೋಜನೆಯನ್ನು ಎಲ್ಲಾ ಜಿಲ್ಲಾಗಳ ಸಹಕಾರ ಕೇಂದ್ರ ಬ್ಯಾಂಕ್‌ಗಳಲ್ಲಿ ಆರಂಭಿಸಲು ಮನವಿ ಸಲ್ಲಿಸಲಾಗುತ್ತದೆ.
ಹೀಗಾಗಿ ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳಲ್ಲಿಯೂ ಮೆಗಾ ಡೇರಿ ಆರಂಭಿಸಿ ಅಲ್ಲಿಯೇ ಹಾಲಿನ ಪೌಡರ್ ಉತ್ಪಾದನೆ ವ್ಯವಸ್ಥೆ ಕಲ್ಪಿಸಲು ಬೇಡಿಕೆ ಸಲ್ಲಿಸುತ್ತೇವೆ ಎಂದು ತಿಳಿಸಿದರು. ರಾಜ್ಯದಲ್ಲಿ ಒಟ್ಟಾರೆ 43 ಸಾವಿರಕ್ಕೂ ಹೆಚ್ಚು ಸಹಕಾರ ಸಂಘಗಳಿದ್ದು, 2 ಕೋಟಿ 32 ಲಕ್ಷ ಸದಸ್ಯರಿದ್ದಾರೆ. ಸಹಕಾರ ಬ್ಯಾಂಕ್‌ಗಳ 10 ಸಾವಿರ ಕೋಟಿ ರೂ.ಸಾಲಮನ್ನಾದಲ್ಲಿ 7,600 ಕೋಟಿ ರೂ. ಸಾಲಮನ್ನಾ ಪೂರ್ಣಗೊಂಡಿದೆ. ಉಳಿದ 2,400 ಕೋಟಿ ರೂ. ಮೊತ್ತದ ಸಾಲಮನ್ನಾಕ್ಕೆ ರೈತರ ದಾಖಲೆ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು.