Advertisement
ಲೋಕಸಭೆ ಚುನಾವಣೆಗೆ ಈಗಿನಿಂದಲೇ ವ್ಯವಸ್ಥಿತ ವಾಗಿ ಸಿದ್ದತೆ ನಡೆಸಿರುವ ಕಾಂಗ್ರೆಸ್ ವಿವಿಧ ಸಮಿತಿಗಳನ್ನೂ ರಚನೆ ಮಾಡಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ(ಸಂಘಟನಾ) ಹಾಗೂ ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಪ್ರದೇಶ ಚುನಾವಣ ಸಮಿತಿ ರಚಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಾ| ಜಿ. ಪರಮೇಶ್ವರ್, ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ, ದೇಶಪಾಂಡೆ, ಈಶ್ವರ್ ಖಂಡ್ರೆ, ಎಚ್.ಕೆ. ಪಾಟೀಲ್, ವೀರಪ್ಪ ಮೊಲಿ, ಮುನಿಯಪ್ಪ, ಬಿ.ಕೆ. ಹರಿಪ್ರಸಾದ್, ಆಸ್ಕರ್ ಫೆರ್ನಾಂಡಿಸ್, ರೆಹಮಾನ್ ಖಾನ್, ಅಮರೇಗೌಡ ಬಯ್ನಾಪುರ್, ಶಾಮನೂರು ಶಿವಶಂಕರಪ್ಪ, ರಾಮಲಿಂಗಾ ರೆಡ್ಡಿ, ಬಿ.ಎಲ್. ಶಂಕರ್, ಬೋಸರಾಜು, ಸಲೀಂ ಅಹಮದ್, ಉಮಾಶ್ರೀ, ಜಲಜಾ ನಾಯ್ಕ ಸದಸ್ಯರಾಗಿದ್ದಾರೆ.
Related Articles
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷದಲ್ಲಿ ನಾಯಕರ ನಡುವೆ ಗುಂಪುಗಾರಿಕೆ, ಪ್ರತಿಷ್ಠೆಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಹೈ ಕಮಾಂಡ್ ಈ ತೀರ್ಮಾನ ಮಾಡಿದೆ ಎಂದು ತಿಳಿದು ಬಂದಿದೆ. 7 ಬಾರಿ ಶಾಸಕರಾಗಿರುವ ರಾಮಲಿಂಗಾ ರೆಡ್ಡಿ ಅವರನ್ನು ಸಂಪುಟದಿಂದ ಹೊರಗಿಟ್ಟಿದ್ದರಿಂದ ಅವರೂ ಪಕ್ಷದ ರಾಜ್ಯ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಅವರನ್ನು ಸಮಾಧಾನಪಡಿಸಲು ಈ ಜವಾಬ್ದಾರಿ ವಹಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
Advertisement