Advertisement

ವಿಮಾನ ನಿಲ್ದಾಣಕ್ಕೆ ತಡವಾಗಿ ಆಗಮಿಸಿ, ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಸಬ್ ಇನ್ಸ್‌ಪೆಕ್ಟರ್

09:41 AM Nov 18, 2020 | Mithun PG |

ಗುಜರಾತ್: ವಿಮಾನ ನಿಲ್ದಾಣಕ್ಕೆ ತಡವಾಗಿ ಆಗಮಿಸಿದ ಸಬ್‌ಸ್ಪೆಕ್ಟರ್ ಶ್ರೇಣಿಯ ಅಧಿಕಾರಿಯೊಬ್ಬರು, ಸ್ಪೈಸ್‌ಜೆಟ್ ವಿಮಾನಯಾನ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

Advertisement

ನವೆಂಬರ್ 17 (ಮಂಗಳವಾರ) ರಂದು ಗುಜರಾತ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ತಡವಾಗಿ ಆಗಮಿಸಿದ್ದರು.  ಇದಕ್ಕೂ ಮೊದಲು ದೆಹಲಿಗೆ  ಹೊರಡಲಿದ್ದ ಸ್ಪೈಸ್ ಜೆಟ್ ಎಸ್‌ಜಿ-8194ರಲ್ಲಿ ಟಿಕೆಟ್ ಕಾಯ್ದಿರಿಸಿದ್ದರು.  ಆದರೆ ಅವರು ತಡವಾಗಿ ನಿಲ್ದಾಣಕ್ಕೆ ಆಗಮಿಸಿದ್ದರಿಂದ, ಬೋರ್ಡಿಂಗ್ ಪಾಸ್‌ಗಳ ಬಗ್ಗೆ ಟಿಕೆಟ್ ಕೌಂಟರ್‌ನಲ್ಲಿ ವಿಮಾನಯಾನ ಸಿಬ್ಬಂದಿಯೊಂದಿಗೆ ವಾದಿಸಲು ಪ್ರಾರಂಭಿಸಿದ್ದಾರೆ. ಆದರೇ ವಿಳಂಬದಿಂದಾಗಿ ಬೋರ್ಡಿಂಗ್ ಪಾಸ್ ನೀಡುವುದನ್ನು ವಿಮಾನಯಾನ ಸಿಬ್ಬಂದಿ ನಿರಾಕರಿಸಿದ್ದಾರೆ.

ಇದರಿಂದ ರೊಚ್ಚಿಗೆದ್ದ ಸಬ್ ಇನ್ಸ್‌ಪೆಕ್ಟರ್, ವಿಮಾನಯಾನ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಯಕ್ಷಗಾನ ಕಲಾವಿದ, ಮಂದಾರ್ತಿ ಮೇಳದ ಜನಪ್ರಿಯ ಸ್ತ್ರೀ ವೇಷಧಾರಿ ಕೆರೆಗೆ ಬಿದ್ದು ಸಾವು

ಈ ಘಟನೆ ಕೆಲಕಾಲ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಎಡೆಮಾಡಿತ್ತು. ಕೂಡಲೇ  ಪರಿಸ್ಥಿತಿಯನ್ನು ನಿಯಂತ್ರಿಸಲು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮತ್ತು ಸಿಐಎಸ್ಎಫ್ ಸ್ಥಳಕ್ಕೆ  ಧಾವಿಸಿದ್ದಾರೆ. ಮಾತ್ರವಲ್ಲದೆ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪ್ರಯಾಣಿಕರನ್ನು ಸ್ಥಳೀಯ ಪೊಲೀಸ್ ಠಾಣೆಗೆ  ಕರೆದೊಯ್ಯಲಾಗಿದೆ.

Advertisement

ವರದಿಗಳ ಪ್ರಕಾರ ವಿಮಾನಯಾನ ಸಿಬ್ಬಂದಿಗಳು ಪೊಲೀಸ್ ಠಾಣೆಯಲ್ಲಿ ನೀಡಿದ ದೂರನ್ನು ಹಿಂಪಡೆದಿದ್ದಾರೆ. ಅದಾಗ್ಯೂ  ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರಿಗೆ ವಿಮಾನ ಹತ್ತಲು ಅವಕಾಶ ನೀಡಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ:  ಅತ್ಯಾಚಾರ ಆರೋಪಿಗಳ ಸಂಬಂಧಿಕರಿಂದ ಕಿರುಕುಳ: ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ ಸಂತ್ರಸ್ತೆ ?

Advertisement

Udayavani is now on Telegram. Click here to join our channel and stay updated with the latest news.

Next