ನವದೆಹಲಿ:ಹರ್ಯಾಣದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಹೋದ ಡಿವೈಎಸ್ಪಿ ಮೇಲೆ ಲಾರಿ ಹರಿಸಿ ಹತ್ಯೆಗೈದ ಬೆನ್ನಲ್ಲೇ ವಾಹನ ತಪಾಸಣೆ ಸಂದರ್ಭದಲ್ಲಿ ಮಹಿಳಾ ಸಬ್ ಇನ್ಸ್ ಪೆಕ್ಟರ್ ಸಂಧ್ಯಾ ಟೊಪ್ನೋ ಅವರ ಮೇಲೆ ಪಿಕಪ್ ವ್ಯಾನ್ ಹರಿಸಿ ಹತ್ಯೆಗೈದಿರುವ ಘಟನೆ ಬುಧವಾರ (ಜುಲೈ 20) ನಸುಕಿನ ವೇಳೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆದಿದೆ.
ಇದನ್ನೂ ಓದಿ:ಮಂಗಳೂರು ಕೋಳಿ ಫಾರಂ ಸಿಬ್ಬಂದಿಗಳ ಮೇಲೆ ಹಲ್ಲೆ: ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ದಾಖಲು
ಹರ್ಯಾಣದ ನುಹ್ ಜಿಲ್ಲೆಯಲ್ಲಿ ಮಂಗಳವಾರ ಡಿವೈಎಸ್ಪಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅಕ್ರಮ ಕಲ್ಲುಗಣಿಗಾರಿಕೆ ತಡೆಯಲು ಹೋದಾಗ ಅವರ ಮೈಮೇಲೆ ಲಾರಿ ಹರಿಸಿ ಹತ್ಯೆಗೈದಿರುವ ಘಟನೆ ನಡೆದಿತ್ತು.
ರಾತ್ರಿ ಅಕ್ರಮವಾಗಿ ಗೋ ಕಳ್ಳಸಾಗಾಣಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಬ್ ಇನ್ಸ್ ಪೆಕ್ಟರ್ ಸಂಧ್ಯಾ ಅವರ ಮೈಮೇಲೆ ವಾಹನ ಹರಿಸಿ ಹತ್ಯೆಗೈದಿರುವ ಘಟನೆ ನಡೆದಿದೆ.
ಘಟನಾ ಸ್ಥಳದಿಂದ ಆರೋಪಿ ಪರಾರಿಯಾಗಿದ್ದು, ನಂತರ ಸಿಸಿಟಿವಿ ಫೂಟೇಜ್ ನೆರವಿನಿಂದ ಪೊಲೀಸರು ಆರೋಪಿಯನ್ನು ಬಂಧಿಸಿ, ವಾಹನವನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.