ಲಕ್ನೋ: ಮಹಿಳೆಯ ಮನೆಗೆ ನುಗ್ಗಿ ಆಕೆ ಮೇಲೆ ಹಲ್ಲೆ ನಡೆಸುವಾಗ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿಯೊಬ್ಬರನ್ನು ಜನರು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಸಬ್ ಇನ್ಸ್ಪೆಕ್ಟರ್ ಆಗಿದ್ದ ಸಂದೀಪ್ ಕುಮಾರ್ ಎಂಬುವರು ಮಹಿಳೆಯೊಬ್ಬರ ಮನೆಗೆ ನುಗ್ಗಿ ಆಕೆ ಮೇಲೆ ದೈಹಿಕವಾಗಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಪೊಲೀಸ್ ನ್ನು ಹಿಡಿದು ವಿಚಾರಿಸಿದ್ದಾರೆ. ಸಿಟ್ಟಾದ ಗ್ರಾಮಸ್ಥರು ಪೊಲೀಸ್ ಅಧಿಕಾರಿಯನ್ನು ಹಲ್ಲೆಗೈದು ಕಂಬಕ್ಕೆ ಕಟ್ಟಿ, ವಿವಸ್ತ್ರಗೊಳಿಸಿದ್ದಾರೆ.
ಇದನ್ನೂ ಓದಿ: Vijay Antony: ತಮಿಳಿನ ಖ್ಯಾತ ನಟ ವಿಜಯ್ ಆ್ಯಂಟನಿ ಪುತ್ರಿ ಮೀರಾ ಆತ್ಮಹತ್ಯೆಗೆ ಶರಣು
ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ, ಪೊಲೀಸ್ ಆಯುಕ್ತರು ತಕ್ಷಣ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿ ಮತ್ತು ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಪ್ರಾರಂಭಿಸಲು ಆದೇಶಿಸಿದ್ದಾರೆ.
ಘಟನೆ ಸಂಬಂಧ ಗ್ರಾಮಸ್ಥರು ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆಯನ್ನು ಮಾಡಿದ್ದಾರೆ. ಘಟನೆ ಸಂಬಂಧ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.
ಸಂದೀಪ್ ಕುಮಾರ್ ಕಳೆದ ಎರಡು ವರ್ಷಗಳ ಹಿಂದಷ್ಟೇ ಪೊಲೀಸ್ ಇಲಾಖೆಗೆ ಸೇರಿದ್ದರು. ಜನರ ಕೈಯಲ್ಲಿ ಸಿಕ್ಕಿಬಿದ್ದ ವೇಳೆ ತಾನು ತನಿಖೆಗಾಗಿ ಮನೆಗೆ ಭೇಟಿ ನೀಡಿದ್ದೆ ಎಂದು ಹೇಳಿದ್ದಾರೆ.