ಚಿಕ್ಕಮಗಳೂರು: ಉರಗ ಸಂತತಿಯಲ್ಲೇ ಅತ್ಯಂತ ಅಪಾಯಕಾರಿ ಎಂದು ಹೇಳಲಾದ ರಕ್ತ ಕನ್ನಡಿ ಹಾವು ಹಾವೊಂದು ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಸೋಮವಾರ ಪತ್ತೆಯಾಗಿದೆ.
ಮಲೆನಾಡಲ್ಲಿ ಇದನ್ನ ಹಪ್ಪಟೆ, ರಕ್ತಗನ್ನಡಿ, ಹವಳದ ಹಾವು ಎಂದು ವಿವಿಧ ಹೆಸರಿನಲ್ಲಿ ಕರೆಯುತ್ತಾರೆ.
ದೇಹದ ಮೇಲೆ ಕಪ್ಪು ಬಣ್ಣವನ್ನು ಹೊಂದಿದ್ದು ಅದೇ ರೀತಿ ಕೆಳಭಾಗ ಕೆಂಪು ಬಣ್ಣದಿಂದ ಕೂಡಿರುವ ಈ ಹಾವು ಕಡಿದರೆ ಸಾಯೋದು ಕಡಿಮೆ ಆದರೆ ದೇಹಕ್ಕೆ ನಾನಾ ಸಮಸ್ಯೆ ಒಡ್ಡುತ್ತೆ ಎಂದು ಹೇಳಲಾಗಿದೆ.
ಈ ಹಾವಿನ ಹಲ್ಲು ಹೆಚ್ಚಾಗಿ ಬಾಗಿರುವುದರಿಂದ ವಿಷ ದೇಹ ಸೇರೋದು ಕಡಿಮೆ ಅಲ್ಲದೆ ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಾತ್ರ ಕಾಣಸಿಗುವ ಅಪರೂಪದ ಈ ಹಾವು ಚಿಕ್ಕಮಗಳೂರು ಜಿಲ್ಲೆ ಕಳಸದ ಉರಗತಜ್ಞ ರಿಜ್ವಾನ್ ಅವರ ಮನೆ ಅಂಗಳದಲ್ಲಿ ಕಾಣಿಸಿಕೊಂಡಿದ್ದು ರಿಜ್ವಾನ್ ಇದನ್ನು ರಕ್ಷಿಸಿದ್ದಾರೆ.
ಇದನ್ನೂ ಓದಿ: Belagavi: ಸರಕಾರದ ಬೇಜವಾಬ್ದಾರಿತನದಿಂದ ಬಾಣಂತಿಯರ ಸಾವು: ವಿಜಯೇಂದ್ರ