ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಇಂದು ಸಂಜೆ ನಡುವ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತದೆ ಎಂದು ಸಚಿವ ಎಸ್‌ಟಿ ಸೋಮಶೇಖರ್ ಹೇಳಿದರು.
ಸುದ್ದಿಗಾರರೊಮದಿಗೆ ಮಾತನಾಡಿದ ಅವರು, ಆರ್ ಆರ್ ನಗರ ಕ್ಷೇತ್ರದ ಟಿಕೆಟ್ ಗಾಗಿ ಎಲ್ಲಾ ಆಕಾಂಕ್ಷಿಗಳು ಪ್ರಯತ್ನ ಮಾಡುತ್ತಾರೆ. ಕೋರ್ ಕಮಿಟಿಯಲ್ಲಿ ಇಂದು ಸಂಜೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಬಳಿಕ ಬಿಜೆಪಿ ಹೈ ಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದರು.
ಹೈಕಮಾಂಡ್ ನಿರ್ಧಾರ ಮಾಡುವ ಮೊದಲು ಯಾರಿಗೆ ಟಿಕೆಟ್ ಸಿಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಪಕ್ಷದಲ್ಲೊಂದು ವ್ಯವಸ್ಥೆ ಇದೆ. ಪಕ್ಷದ ಚೌಕಟ್ಟಿನಲ್ಲೇ ಎಲ್ಲವೂ ನಡೆಯುತ್ತದೆ ಎಂದು ಅವರು ಹೇಳಿದರು.
ಇದನ್ನೂ ಓದಿ:ಕೃಷಿ ತಿದ್ದುಪಡಿ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಹೊರಡಿಸಿಲು ಸಂಪುಟ ಸಭೆಯಲ್ಲಿ ತೀರ್ಮಾನ
ಕ್ಷೇತ್ರದ ಮಾಜಿ ಶಾಸಕ ಮುನಿರತ್ನ ಅವರರೂ ಟಿಕೆಟ್ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಅದೇ ರೀತಿ ಹಲವು ಆಕಾಂಕ್ಷಿಗಳು ಟಿಕೆಟ್ ಗಾಗಿ ಮನವಿ ಮಾಡುತ್ತಿದ್ದಾರೆ. ಗೆಲುವಿನ ಸಾಧ್ಯತೆ, ಸಾಧಕ ಬಾಧಕ ನೋಡಿ ಹೈ ಕಮಾಂಡ್ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಎಸ್ ಟಿ ಸೋಮಶೇಖರ್ ಹೇಳಿದರು.