ಬಾಲಸೋರ್ : ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದಿದೆ. ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಢಿಕ್ಕಿ ಸಂಭವಿಸಿದ್ದು, ಸೂಪರ್‌ಫಾಸ್ಟ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡು ಎಕ್ಸ್‌ಪ್ರೆಸ್ ರೈಲಿನ ಹಲವಾರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
Advertisement
ವಿಶೇಷ ಪರಿಹಾರ ಆಯುಕ್ತರ ಕಚೇರಿಯ ಅಧಿಕಾರಿಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಅಪಘಾತದ ಸ್ಥಳಕ್ಕೆ ತಂಡಗಳನ್ನು ಕಳುಹಿಸಲಾಗಿದೆ ಎಂದು ಹೇಳಿದರು.