Advertisement
ಕೋವಿಶೀಲ್ಡ್ ಲಸಿಕೆ ನೀಡುವ ಯೋಜನೆಗೆ ಜಿಲ್ಲೆಯಲ್ಲಿ ನಿರೀಕ್ಷೆಯಂತೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಲಸಿಕೆ ಪಡೆದವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿಲ್ಲ. ಎಲ್ಲರೂ ಆರೋಗ್ಯವಾಗಿದ್ದು, ಲಸಿಕೆ ಪಡೆದ ದಿನದಿಂದಲೇ ಅವರು ಎಂದಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಎರಡನೇ ಡೋಸ್ ತೆಗೆದುಕೊಳ್ಳಲು ಸಜ್ಜಾಗಿದ್ದು, ಕಾತುರದಿಂದ ಎದುರು ನೋಡುತ್ತಿದ್ದಾರೆ.
Related Articles
Advertisement
ಲಸಿಕೆ ಕುರಿತು ಜಾಗೃತಿ: ಕೋವಿಶೀಲ್ಡ್ ಲಸಿಕೆ ಪಡೆದರೆ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವ ಆತಂಕದಿಂದ ಹಲವರು ಲಸಿಕೆ ಪಡೆಯಲು ನೋಂದಾಯಿಸಿಕೊಂಡಿದ್ದರೂ ಲಸಿಕೆ ಪಡೆಯಲು ಹಿಂಜಯುತ್ತಿದ್ದಾರೆ. ಇನ್ನು ಕೆಲವರು ಉದಾಸೀನತೆ ತೋರುತ್ತಿದ್ದು, ಸಣ್ಣ ಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವವರು ಲಸಿಕೆಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಿತು ಎಂಬ ಆತಂಕದಿಂದ ಲಸಿಕೆ ಪಡೆಯದೇ ದೂರ ಉಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ನೋಂದಾಯಿಸಿಕೊಂಡಿದ್ದರೂ ಸಲಿಕೆ ಹಾಕಿಸಿಕೊಳ್ಳದವರನ್ನು ಸಂಪರ್ಕಿಸಿ ಜಾಗೃತಿ ಮೂಡಿಸಲಾಗುತ್ತಿದೆ. ಲಸಿಕೆ ಬಗ್ಗೆ ಇರುವ ಆತಂಕ ದೂರ ಮಾಡಿಸಲು ಆರೋಗ್ಯ ಇಲಾಖೆಯಲ್ಲಿರುವ ಸೌಲಭ್ಯಗಳ ಬಗ್ಗೆ ತಿಳಿವಳಿಕೆ ನೀಡಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವರಿಕೆ ಮಾಡಲಾಗುತ್ತಿದ್ದು, ಫೆ.9ರಿಂದ ಎರಡನೇ ಡೋಸ್ ನೀಡಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ.