Advertisement

ಸೋಂಕಿತರ ಅಸಹಾಯಕತೆ ದುರುಪಯೋಗ ಸಲ್ಲ

07:27 PM May 02, 2021 | Team Udayavani |

ಗದಗ: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕು ಪ್ರಮಾಣ ದಿನದಿಂದ ದಿನಕ್ಕೆ ಅ ಧಿಕವಾಗುತ್ತಿದೆ. ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸುವ ಜನಸಾಮಾನ್ಯರು, ಬಡವರಿಗೆ ಸರಿಯಾಗಿ ಚಿಕಿತ್ಸೆ ಒದಗಿಸಬೇಕು. ಕೊರೊನಾ ಸೊಂಕಿತರ ಅಸಹಾಯಕತೆಯನ್ನೇ ದುರುಪಯೋಗ ಮಾಡುವುದು ಕಂಡು ಬಂದಲ್ಲಿ ಶಿಸ್ತು ಕ್ರಮಕ್ಕೆ ಒಳಪಡಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾ ಧಿಕಾರದ ಅಧ್ಯಕ್ಷ ಎಂ. ಸುಂದರೇಶ್‌ ಬಾಬು ಎಚ್ಚರಿಸಿದರು.

Advertisement

ಜಿಲ್ಲಾಡಳಿತ ಭವನದ ಜಿಪಂ ವಿಡಿಯೋ ಸಭಾಂಗಣದಲ್ಲಿ ಜರುಗಿದ ಕೊರೊನಾ ಸೋಂಕು ನಿಯಂತ್ರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೋಂಕು ಅ ಕವಾಗುತ್ತಿದ್ದಂತೆ ಜನ ತೊಂದರೆಗಳಿಗೆ ಸಿಲುಕಿದ್ದಾರೆ. ಬಡವರು, ಸಾಮಾನ್ಯರು ನೇರವಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸಾ ವೆಚ್ಚ ಭರಿಸಲು ಕಷ್ಟಪಡುತ್ತಿದ್ದಾರೆ. ಅಂತಹವರ ನೆರವಿಗಾಗಿ ಸರ್ಕಾರವು ಉಚಿತ ಚಿಕಿತ್ಸೆ ಒದಗಿಸುತ್ತಿದೆ. ಸರ್ಕಾರಿ ವೈದ್ಯರು, ಸಿಬ್ಬಂದಿ ಸರಿಯಾಗಿ ಚಿಕಿತ್ಸೆ ನೀಡುವ ಮೂಲಕ ಜನರ ಪ್ರಾಣ ಉಳಿಸಬೇಕು ಎಂದು ಸೂಚಿಸಿದರು.

ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಗೊಳಿಸಿರುವ ದರಕ್ಕಿಂತ ಹೆಚ್ಚು ಮೊತ್ತ ವಸೂಲಿ ಮಾಡದಂತೆ ಆರೋಗ್ಯ ಇಲಾಖಾ ಧಿಕಾರಿಗಳು ನಿಗಾ ವಹಿಸಬೇಕು. ಸರ್ಕಾರವು ಕೋವಿಡ್‌ ಸೋಂಕಿತರ ಚಿಕಿತ್ಸೆ ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳಿಗೆ ಎಲ್ಲರೂ ಸಹಕರಿಸಬೇಕು ಎಂದರು. ಜಿಲ್ಲೆಯಲ್ಲಿ ಸೋಂಕಿತರಲ್ಲಿ ಶೇ. 85 ಜನರು ಹೋಂ ಐಸೋಲೇಷನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಆರೋಗ್ಯದ ಮೇಲೂ ಆರೋಗ್ಯ ಇಲಾಖೆ ಅ ಧಿಕಾರಿಗಳು ನಿಯಮಾನುಸಾರ ಚಿಕಿತ್ಸೆ ನೀಡಬೇಕು. ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿ ಕಾರಿಗಳು ಮೇಲುಸ್ತುವಾರಿ ಜವಾಬ್ದಾರಿ ಕಾರ್ಯ ನಿರ್ವಹಿಸಲು ತಿಳಿಸಿದರು.

ಸೋಂಕಿತರ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಯನ್ನು ಸರಿಯಾಗಿ ಪೂರ್ಣ ಪ್ರಮಾಣದಲ್ಲಿ ಬಳಕೆಮಾಡಿಕೊಳ್ಳಬೇಕು. ಹೆಚ್ಚುವರಿ ಚಿಕಿತ್ಸೆ ಅಗತ್ಯವಿದೆ ಎಂದು ಕಂಡು ಬಂದಲ್ಲಿ ಮಾತ್ರವೇ ಜಿಲ್ಲಾಸ್ಪತ್ರೆಗೆ ಸೋಂಕಿತರನ್ನು ಕಳುಹಿಸಬೇಕು. ಈ ಕುರಿತು ಡಿಎಚ್‌ಒ ಅವರು ತಾಲೂಕುವಾರು ಭೇಟಿ ನೀಡಿ ಖುದ್ದಾಗಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು. ಸೋಂಕಿತರ ಚಿಕಿತ್ಸೆಯ ಜೊತೆಗೆ ಅವರಿಗೆ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಊಟ ಉಪಹಾರ ಒದಗಿಸಬೇಕು. ಸೋಂಕಿತರ ಆರೋಗ್ಯ ಸ್ಥಿತಿ ಕುರಿತು ಕುಟುಂಬ ವರ್ಗದವರಿಗೆ ಮಾಹಿತಿ ನೀಡಬೇಕು.ತಾಲೂಕು ಆಸ್ಪತ್ರೆಗಳನ್ನು ಸಂಪೂರ್ಣ ಕೋವಿಡ್‌ ಆಸ್ಪತ್ರೆಯಾಗಿಸಿದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡೇತರ ಕಾಯಿಲೆಗಳಿಗೆ ಚಿಕಿತ್ಸೆ ದೊರೆಯುವಂತೆ ಮಾಡಬೇಕು ಎಂದರು.

ಜಿಪಂ ಸಿಇಒ ಭರತ್‌ ಎಸ್‌. ಮಾತನಾಡಿ, ತಾಲೂಕು ಆಸ್ಪತ್ರಗೆಳಿಗೆ ಸ್ಥಳೀಯವಾಗಿ ಅಗತ್ಯವಿರುವ ಉಪಕರಣ, ಸಾಮಗ್ರಿಗಳನ್ನು ನಿಮ್ಮ ಹಂತದಲ್ಲಿಯೇ ಖರೀದಿಸಿ ಚಿಕಿತ್ಸೆ ಒದಗಿಸಬೇಕು. ಒಟ್ಟಾರೆ ಸೋಂಕಿನ ಚಿಕಿತ್ಸೆ, ನಿಯಂತ್ರಣ ಹಾಗೂ ಲಸಿಕಾ ಕಾರ್ಯವನ್ನು ಶಿಸ್ತುಬದ್ಧವಾಗಿ ನಿರ್ವಹಿಸಬೇಕು. ಇದರಲ್ಲಿ ಅಧಿ ಕಾರಿಗಳ, ವೈದ್ಯರ ನಿಷ್ಕಾಳಜಿ ಸಹಿಸಲಾಗದು ಎಂದರು.

Advertisement

ಸಭೆಯಲ್ಲಿ ಸಭೆಯಲ್ಲಿ ಅಪರ ಜಿಲ್ಲಾಧಿ ಕಾರಿ ಸತೀಶ್‌ ಕುಮಾರ ಎಂ., ಉಪವಿಭಾಗಾಕಾರಿ ರಾಯಪ್ಪ ಹುಣಸಗಿ, ಡಿಎಚ್‌ಒ ಡಾ|ಸತೀಶ ಬಸರಿಗಿಡದ, ಆರ್‌.ಸಿ.ಎಚ್‌ ಅಧಿ ಕಾರಿ ಡಾ|ಬಿ. ಎಂ.ಗೋಜನೂರ, ಜಿಪಂ ಉಪಕಾರ್ಯದರ್ಶಿ ಬಿ.ಕಲ್ಲೇಶ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಅನೀಲ ಕುಮಾರ ಮುದ್ದಾ, ಭೂದಾಖಲೆಗಳ ಉಪನಿರ್ದೇಶಕ ರವಿಕುಮಾರ, ಸೇರಿದಂತೆ ತಾಲೂಕ ವೈದ್ಯಾ  ಧಿಕಾರಿಗಳು, ಎಎಂಒಗಳು, ತಹಶೀಲ್ದಾರ್‌ ರು, ಸ್ಥಳೀಯ ಸಂಸ್ಥೆಗಳ ಮುಖ್ಯಾ ಧಿಕಾರಿಗಳು, ತಾಪಂ ಇಒ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next