Advertisement

ಎಲ್ಲ ಜಿಲ್ಲೆಗಳಲ್ಲೂ ಕೊರೊನಾ ಪರೀಕ್ಷಾ ಕೇಂದ್ರ

12:51 AM Mar 21, 2020 | Lakshmi GovindaRaj |

ಮಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಶಂಕಿತ ರೋಗಿಗಳ ಗಂಟಲಿನ ದ್ರವದ ಮಾದರಿ ಪರೀಕ್ಷೆಗಾಗಿ ಪ್ರಯೋಗಾಲಯ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

Advertisement

ಕೊರೊನಾ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕೇರಳದಲ್ಲಿ ಈಗಾಗಲೇ ಕೊರೊನಾ ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ, ಆ ರಾಜ್ಯದಿಂದ ಸಾಕಷ್ಟು ಮಂದಿ ದಿನನಿತ್ಯದ ವಹಿವಾಟಿಗೆ ಮಂಗಳೂರಿಗೆ ಭೇಟಿ ನೀಡುವುದರಿಂದ ಆದ್ಯತೆ ಮೇರೆಗೆ ಮಂಗಳೂರಿನಲ್ಲಿ ತುರ್ತಾಗಿ ಪ್ರಯೋಗಾಲಯ ಆರಂಭಿ ಸಲಾಗುವುದು ಎಂದರು.

ಕೊರೊನಾದಿಂದ ಆತಂಕಕಾರಿ ವಾತಾವರಣ ಸೃಷ್ಟಿಯಾಗಿರುವುದು ನಿಜ, ಆದರೆ, ಯಾರೂ ಭಯ ಪಡುವ ಅಗತ್ಯವಿಲ್ಲ. ಕರ್ನಾಟಕಕ್ಕೆ ಹೊರ ದೇಶಗಳಿಂದ ಬರುತ್ತಿರುವವರ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಲಾಗುತ್ತಿದೆ. 1.75 ಲಕ್ಷ ಜನರನ್ನು ಈಗಾಗಲೇ ಸ್ಕ್ಯಾನಿಂಗ್‌ ಮಾಡಲಾಗಿದ್ದು, ರಾಜ್ಯದಲ್ಲಿ ಈವರೆಗೆ 10 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ 6,000 ಥರ್ಮಲ್‌ ಸ್ಕ್ರೀನಿಂಗ್‌ ಯಂತ್ರಗಳು ಲಭ್ಯವಿದ್ದು, ಕೊರೊನಾ ನಿಯಂತ್ರಣಕ್ಕೆ ಯಾವುದೇ ರೀತಿಯಲ್ಲೂ ಹಣಕಾಸಿನ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜನತೆ ಸರಕಾರದ ಸೂಚನೆಗಳನ್ನು ಪಾಲಿಸ ಬೇಕು. ಸ್ವತ್ಛತೆಯನ್ನು ಕಾಪಾಡಿ ಕೊಳ್ಳುವುದು ಅತಿ ಮುಖ್ಯ. ಸಾರ್ವಜನಿಕ ಸಭೆ, ಸಮಾರಂಭಗಳಿಂದ ದೂರ ಇರುವುದರ ಜತೆಗೆ ಸಾರ್ವಜನಿಕವಾಗಿ ಪರಸ್ಪರ ಭೇಟಿಯ ಸಂದರ್ಭ ದೂರವನ್ನು ಕಾಯ್ದುಕೊಳ್ಳಬೇಕು. ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದು ಜಾಗರೂಕತೆ ವಹಿಸಬೇಕು ಎಂದು ಜನರಿಗೆ ಸಲಹೆ ನೀಡಿದರು.

ರಾಜ್ಯದಲ್ಲಿ ಮೂರು ತಿಂಗಳಿಗೆ ಬೇಕಾಗುವಷ್ಟು ಮಾಸ್ಕ್ಗಳ ದಾಸ್ತಾನು ಇದೆ. ಯಾರೇ ಆಗಲಿ ಮಾಸ್ಕ್ಗಳನ್ನು ಕಾಳಸಂತೆಯಲ್ಲಿ ಮಾರಾಟ (ಬ್ಲ್ಯಾಕ್‌) ಮಾಡುವುದು ಕಡು ಬಂದರೆ ಜನರು ಜಿಲ್ಲಾಡಳಿತಕ್ಕೆ ದೂರು ನೀಡಬಹುದು. ಮೆಡಿಕಲ್‌ಗ‌ಳಲ್ಲಿ ಇಂತಹ ದಂಧೆ ನಡೆಸಿದರೆ ಅವುಗಳ ಪರವಾನಿಗೆ ರದ್ದುಪಡಿಸಲಾಗುವುದು.
-ಶ್ರೀರಾಮುಲು, ಆರೋಗ್ಯ ಸಚಿವ

Advertisement
Advertisement

Udayavani is now on Telegram. Click here to join our channel and stay updated with the latest news.

Next