Advertisement

ಪರೀಕ್ಷೇಗೊಳಪಟ್ಟವರು ಸರಿಯಾದ ವಿಳಾಸ ನೀಡುತ್ತಿಲ್ಲ

05:52 PM May 13, 2021 | Team Udayavani |

ಕೋಲಾರ: ಕೋವಿಡ್‌-19 ಪರೀಕ್ಷೆ ಮಾಡಿಸಿಕೊಂಡ ವರು ಅವರ ಮೊಬೈಲ್‌ ನಂಬರ್‌, ವಿಳಾಸ ಸರಿಯಾಗಿ ನೀಡಿದರೆ, ನಿಮ್ಮ ಪ್ರಾಣ ಮತ್ತು ಸಮಾಜದ ರಕ್ಷಣೆಗೆ ನೀವು ನೀಡುವ ದೊಡ್ಡ ಕೊಡುಗೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

Advertisement

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿಗಳ ಕಚೇರಿ ಕೋವಿಡ್‌ ವಾರ್‌ ರೂಂ, ಜಿಲ್ಲಾ ಎಸ್‌ ಎನ್‌ಆರ್‌ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್‌ ವಾರ್‌ ರೂಂನಲ್ಲಿ ಕನಿಷ್ಠ ಶೇ.25 ರಿಂದ 30 ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡವರನ್ನು ನಾವು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಏಕೆಂದರೆ, ಅವರ ಮೊಬೈಲ್‌ ನಂಬರ್‌ ಸ್ವಿಚ್‌ಆಫ್‌ ಮಾಡಿಕೊಂಡಿರುತ್ತಾರೆ. ಪರೀಕ್ಷೆ ಮಾಡಿಸಿಕೊಂಡವರ ಫಲಿ ತಾಂಶವನ್ನು ತಿಳಿದುಕೊಳ್ಳಲು ವಾರ್‌ ರೂಂ ಕಡೆಯಿಂದ ಕರೆ ಮಾಡಿದಾಗ ಪ್ರತಿಕ್ರಿಯೆ ನೀಡಿ, ಸರಿಯಾದ ವಿಳಾಸ, ಮೊಬೈಲ್‌ ನಂಬರ್‌ ನೀಡಬೇಕು ಎಂದು ಹೇಳಿದರು.

ವೈದ್ಯರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಗ್ರಾಪಂ ಟಾಸ್ಕ್ ಪೋರ್ಸ್‌ ಸಮಿತಿಯವರು ಮನೆ ಮನೆಗೆ ಭೇಟಿ ಕೊಟ್ಟು ಪರಿಶೀಲಿಸಿ ನಿಮ್ಮ ರಕ್ಷಣೆ ಮಾಡುತ್ತಾರೆ. ಅವರಿಗೆ ನಿಮ್ಮ ಸಹಕಾರ ಬೇಕು ಎಂದು ತಿಳಿಸಿದರು. ತಲಾ 50 ಆಕ್ಸಿಜನ್‌ ಬೆಡ್‌: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 100 ಆಕ್ಸಿಜನ್‌ ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು. ಜಿಲ್ಲಾ ಎಸ್‌ಎನ್‌ಆರ್‌ ಆಸ್ಪತ್ರೆ ಯಲ್ಲಿ ಆಕ್ಸಿಜನ್‌ ಸಮಸ್ಯೆಯನ್ನು ಎರಡು ಮೂರು ದಿನಗಳಲ್ಲಿ ಸರಿ ಮಾಡಲಾಗುವುದು. ವಾರದಲ್ಲಿ ಎಸ್‌. ಎನ್‌.ಆರ್‌ ಆಸ್ಪತ್ರೆ ಮತ್ತು ಕೆ.ಜಿ.ಎಫ್‌ ಆಸ್ಪತ್ರೆಯಲ್ಲಿ ತಲಾ 50 ಆಕ್ಸಿಜನ್‌ ಬೆಡ್‌ ಗಳನ್ನು ಹೆಚ್ಚು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬೆಡ್‌ ಸೌಲಭ್ಯ ಇದೆ: ಜಿಲ್ಲಾ ಆಸ್ಪತ್ರೆಯಲ್ಲಿ ಇರುವ 40 ವೆಂಟಿಲೇಟರ್‌ ಗಳು ಮತ್ತು ಐ.ಸಿ.ಯು.ಗಳು ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ದಿನ ಜಿಲ್ಲಾಡಳಿತಕ್ಕೆ ಒಳಪಡುವ ಆಸ್ಪತ್ರೆಗಳಲ್ಲಿನ ಬೆಡ್‌ಗಳ ಸೌಲಭ್ಯದ ಬಗ್ಗೆ ಜಿಲ್ಲಾಧಿಕಾರಿಗಳು ಸಂಜೆ 6 ಗಂಟೆಗೆ ಬುಲೆಟಿನ್‌ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ. ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಬೆಡ್‌ ಹೆಚ್ಚು ಮಾಡಲಾಗುತ್ತದೆ, ಆಕ್ಸಿಜನ್‌ ಪ್ಲಾಂಟ್‌ ನಿರ್ಮಿಸಲಾಗುñ¤‌ದೆ. ಇವತ್ತಿನ ಅವಶ್ಯಕತೆಗೆ ತಕ್ಕಷ್ಟು ಬೆಡ್‌ಗಳ ಸೌಲಭ್ಯ ಇದೆ ಎಂದು ತಿಳಿಸಿದರು.

ಹೆಚ್ಚಿನ ಆದ್ಯತೆ ನೀಡಿ: 5 ದಿನಗಳ ಹಿಂದೆ ಕೋವಿಡ್‌ ಪಾಸಿಟಿವ್‌ ಬಂದವರಿಗೆ ಮನೆ ಮನೆಗೂ ಮೆಡಿಕಲ್‌ ಕಿಟ್‌ ಕೊಡುತ್ತಿದ್ದೇವೆ. ಯಾರಿಗಾದರೂ ತಲುಪದಿದ್ದಲ್ಲಿ ತಾಲೂಕು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿದರೆ ಪಂಚಾಯ್ತಿ ಟಾಸ್ಕ್ ಪೋರ್ಸ್‌ ನವರು ತಂದು ಕೊಡುತ್ತಾರೆ. ವ್ಯಾಕ್ಸಿನ್‌ 45 ವರ್ಷ ಮೇಲ್ಪಟ್ಟವರಿಗೆ ಮತ್ತು ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

Advertisement

ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲು: ಕೋವಿಡ್‌ ಲಕ್ಷಣಗಳು ಕಂಡು ಬಂದ ತಕ್ಷಣ ಹೆದರದೆ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆಯಂತೆ ನಡೆದುಕೊಳ್ಳಬೇಕು. ವೈದ್ಯರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಪರಿಶೀಲಿಸಿ ಕೋವಿಡ್‌ ಲಕ್ಷಣ ಕಂಡು ಬಂದ ತಕ್ಷಣ ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸಲಾಗುವುದು ಎಂದು ತಿಳಿಸಿದರು. ನಂತರ ಮಾಲೂರಿನ ಸಾರ್ವಜನಿಕ ಆಸ್ಪತ್ರೆ, ಕೊರೊನಾ ವಾರ್‌ ರೂಂಗೆ ಭೇಟಿ ನೀಡಿ ಪರಿಶೀಲಿಸಿದರು.

ಸಂಸದ ಎಸ್‌.ಮುನಿಸ್ವಾಮಿ, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ, ಜಿಪಂ ಸಿಇಒ ಎನ್‌.ಎಂ.ನಾಗರಾಜ್‌, ಎಸ್ಪಿ ಕಾರ್ತಿಕ್‌ ರೆಡ್ಡಿ, ತಹಶೀಲ್ದಾರ್‌ ಶೋಭಿತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯ ಕುಮಾರ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಗದೀಶ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next