Advertisement

ಕೊರೊನಾ ಲಸಿಕೆ ಪಡೆದ ಜಿಲ್ಲಾಧಿಕಾರಿ

01:50 PM Feb 09, 2021 | Team Udayavani |

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೋಮವಾರ ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌-19 ಲಸಿಕೆಯನ್ನು ಪಡೆದರು.

Advertisement

ಲಸಿಕೆ ಪಡೆದ ನಂತರ ನಿಯಮದಂತೆ 30 ನಿಮಿಗಳ ಕಾಲ ನಿಗಾ  ಕೊಠಡಿಯಲ್ಲಿ ಇದ್ದು, ವೈದ್ಯಕೀಯ ತಪಾಸಣೆಗೆ ಸ್ಪಂದಿಸಿದರು. ಬಳಿಕ ಮಾತನಾಡಿದ ಅವರು, ದೇಶದಲ್ಲಿ ನೀಡಲಾಗುತ್ತಿರುವ ಕೋವಿಡ್‌ ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು, ಯಾವುದೇ ಅಡ್ಡಪರಿಣಾಮಗಳಿಲ್ಲ. ಹೀಗಾಗಿ ಅಧಿಕಾರಿ, ಸಿಬ್ಬಂದಿ ಭಯಪಡದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈಗ ನಾನು ಲಸಿಕೆ ಹಾಕಿಸಿಕೊಂಡಿದ್ದು, ಯಾವುದೇ ತೊಂದರೆ ಇಲ್ಲ. ಹಾಗಾಗಿ ಲಸಿಕೆ ಪಡೆಕೊಳ್ಳುವರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ. ಅನೇಕ ದೇಶಗಳು ಭಾರತ ಸಿದ್ಧಪಡಿಸಿದ ಲಸಿಕೆ ಪಡೆಯಲು ಮನವಿ ಮಾಡಿ¨ªಾರೆ. ಹೀಗಿರುವಾಗ ನಮ್ಮ ದೇಶದಲ್ಲಿ ಸಂಶೋಧನೆ ಮಾಡಿದ ಲಸಿಕೆ ಬಗ್ಗೆ ಸಂಶಯ ಪಡಬಾರದು ಎಂದರು.

ಜಿಲ್ಲೆಯಲ್ಲಿ ಮೊದಲನೇ ಹಂತದಲ್ಲಿ ಈಗಾಗಲೇ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಎರಡನೇ ಹಂತದಲ್ಲಿ ಕಂದಾಯ ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ, ಪೌರಕಾರ್ಮಿಕರು ಸೇರಿದಂತೆ  ಒಟ್ಟು 16 ಸಾವಿರ ಮುಂಚೂಣಿಯಲ್ಲಿರುವ ಸಿಬ್ಬಂದಿಗಳಿಗೆ ಇಂದಿನಿಂದಲೇ ಲಸಿಕೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸರ್ಕಾರವು ಜನರ ಆರೋಗ್ಯವನ್ನು ಗಮನದಲ್ಲಿರಿಸಿ ಲಸಿಕೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುತ್ತದೆ. ಲಸಿಕೆ ಪಡೆಯುವ ಸಂದರ್ಭ ಬಂದಾಗ ಯಾರೂ ಕೂಡ ಹಿಂಜರಿಯಬಾರದು. ಲಸಿಕೆ ಸುಲಭವಾಗಿ ಸಿಗುತ್ತಿದೆ ಎಂದು ನಿರ್ಲಕ್ಷಿಸುವುದು ಸರಿಯಲ್ಲ ಎಂದು ತಿಳಿಸಿದರು.

Advertisement

ಇದನ್ನೂ ಓದಿ : ಹಿಂಬದಿಯಿಂದ ಕಾರು ಡಿಕ್ಕಿ: ಬೈಕ್‌ ಸವಾರ ಸಾವು

ಲಸಿಕೆಯನ್ನು ಪ್ರತಿಯೊಬ್ಬರಿಗೂ ನೀಡುವುದಕ್ಕೆ ತುಂಬಾ ದಿನಗಳಾಗಬಹುದು. ಅಲ್ಲಿಯವರೆಗೂ ಪ್ರತಿಯೊಬ್ಬರೂ ಮಾಸ್ಕ ಧರಿಸುವುದು ಹಾಗೂ ದೈಹಿಕ ಅಂತರ ಕಾಪಾಡುವುದನ್ನು ಮರೆಯಬಾರದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಅಮರನಾಥ್‌, ಕೋವಿಡ್‌ ಆಸ್ಪತ್ರೆಯ ಜಿÇÉಾ ಸರ್ಜನ್‌ ಡಾ.ರಾಜೇಶ್ವರಿ ಸೇರಿದಂತೆ ಇನ್ನಿತರ ವೈದ್ಯಕೀಯ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next