Advertisement

ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 41ಕ್ಕೆ ಏರಿಕೆ: 1,300 ಜನರಲ್ಲಿ ವೈರಾಣು ಪತ್ತೆ

07:07 PM Mar 20, 2020 | Mithun PG |

ವುಹಾನ್ : ಚೀನಾದಲ್ಲಿ ಆವರಿಸಿರುವ ಮಾರಣಾಂತಿಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 41 ಕ್ಕೆ ಏರಿದೆ. ಸರಿಸುಮಾರು 1300 ಜನರು ಈ ವೈರಾಣುವಿಗೆ ತುತ್ತಾಗಿದ್ದಾರೆ ಎಂದು ವೈದ್ಯಾಧಿಕಾರಿಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Advertisement

ಮೊದಲ ಬಾರಿಗೆ ವೈರಸ್ ಪತ್ತೆಯಾದ  ವುಹಾನ್ ನಗರದಲ್ಲೇ ಹೊಸದಾಗಿ 15 ಜನರು ಈ ಸೋಂಕುವಿಗೆ ತುತ್ತಾಗಿ ಮೃತಪಟ್ಟಿದ್ದಾರೆ. ಈ ನಗರದಲ್ಲಿ ಮತ್ತೆ 444 ಜನರಿಗೆ ವೈರಾಣು ಇರುವುದು ಧೃಢಪಟ್ಟಿದ್ದು , 1,287 ಜನರು  ಈ ಮಾರಾಣಾಂತಿಕ ವೈರಸ್ ಗೆ  ತುತ್ತಾಗಿದ್ದಾರೆ ಎನ್ನುವ ಶಂಕೆ ವ್ಯಕ್ತಪಡಿಸಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

ಚೀನಗೆ ವಕ್ಕರಿಸಿಕೊಂಡಿರುವ ಡೆಡ್ಲಿ ಕೊರೊನಾವೈರಸ್‌ ದಿನಕಳೆದಂತೆ ಭೀತಿ ಹೆಚ್ಚಿಸುತ್ತಿದ್ದು, ಇಲ್ಲಿನ 13 ನಗರಗಳು ಅಕ್ಷರಶಃ ಲಾಕ್‌ ಡೌನ್‌ ಆಗಿವೆ. ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತೆ 4 ನಗರಗಳಲ್ಲಿ ಸಂಚಾರ ವ್ಯವಸ್ಥೆಗಳನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿದೆ. ಹೀಗಾಗಿ 4.10 ಕೋ. ಮಂದಿಯ ಜೀವನ ಅಸ್ತವ್ಯಸ್ತವಾಗಿದೆ.

ಸಂಚಾರ ನಿರ್ಬಂಧ ಹೇರಿರುವ ಕಾರಣ ಜನರು ಮನೆಗಳಿಂದ ಹೊರಬರುತ್ತಿಲ್ಲ. ಔಷಧ ಅಂಗಡಿಗಳು ಹೊರತುಪಡಿಸಿ ಬೇರೆ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ. ಸಾರ್ವಜನಿಕ ಸಮಾರಂಭಗಳು, ಕೌಟುಂಬಿಕ ಕಾರ್ಯಕ್ರಮಗಳನ್ನೂ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ.

ಚೀನದ ಮಹಾಗೋಡೆಯ ಒಂದು ಭಾಗದ ವೀಕ್ಷಣೆಗೆ ಅವಕಾಶ ನಿರಾಕರಿಸಲಾಗಿದ್ದು, ಪ್ರವಾಸಿಗರ ಆಗಮನಕ್ಕೆ ಕಡಿವಾಣ ಹಾಕಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next