Advertisement

ಕೊರೊನಾ ಸೋಂಕು ಪೀಡಿತರ ಸಂಖ್ಯೆ 28ಕ್ಕೇರಿಕೆ: 16 ಇಟಲಿ ಪ್ರವಾಸಿಗರಿಗೆ ಕೊರೊನಾ ವೈರಸ್

09:05 AM Mar 05, 2020 | keerthan |

ಹೊಸದಿಲ್ಲಿ: ಮಾರಣಾಂತಿಕ ಕೊರೊನಾ ವೈರಸ್ ಭಾರತದಲ್ಲಿ ತನ್ನ ಕಬಂದಬಾಹುವನ್ನು ಚಾಚುತ್ತಿದ್ದು, ಇದುವರೆಗೆ 28 ಜನರಲ್ಲಿ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.

Advertisement

ಭಾರತದ ಪ್ರವಾಸಕ್ಕೆ ಬಂದಿರುವ 16 ಮಂದಿ ಇಟಲಿ ಪ್ರವಾಸಿಗರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ ಎಂದು ವರದಿಯಾಗಿದೆ. ಜೈಪುರಕ್ಕೆ ಪ್ರವಾಸಕ್ಕೆ ಬಂದಿರುವ ಇಟಲಿ ಮಹಿಳೆಯೋರ್ವರಿಗೆ ಮಂಗಳವಾರ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು.

ದಿಲ್ಲಿಯ ಓರ್ವ ಪ್ರಜೆಗೆ ಸೋಂಕು ತಗುಲಿದ್ದು, ಆತನ ಸಂಪರ್ಕಕ್ಕೆ ಬಂದಿದ್ದಆಗ್ರಾದ ಒಂದು ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ಖಚಿತವಾಗಿದೆ. ಕುಟುಂಬದ ಆರು ಜನರಿಗೆ ಸೋಂಕು ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.

ಮೊದಲ ಹಂತದಲ್ಲಿ 15 ಪರೀಕ್ಷಾ ಲ್ಯಾಬ್ ಗಳನ್ನು ನಿರ್ಮಿಸಲಾಗಿದೆ. ಇನ್ನೂ 19 ಲ್ಯಾಬ್ ಗಳನ್ನು ನಿರ್ಮಿಸಲಾಗುತ್ತದೆ ಎಂದರು. ಭಾರತಕ್ಕೆ ಬಂದಿಳಿಯುವ ಎಲ್ಲಾ ವಿಮಾನ ಪ್ರಯಾಣಿಕರನ್ನು ತಪಾಸಣೆಗೆ ಒಳಗಿಸಲಾಗುವುದು ಎಂದು ಸಚಿವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next