Advertisement
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾತ್ರ ಹೊರಗಡೆ ಬರುವಂತೆ ಮಾಡಿರುವ ಮನವಿಗೆ ಸಾರ್ವಜನಿಕರು ಸ್ಪಂದಿಸಿದ್ದಾರೆ. ಇದೇ ರೀತಿ ಮುಂದಿನ ದಿನಗಳಲ್ಲಿ ಸಹ ಸಾರ್ವಜನಿಕರು ಸ್ಪಂದಿಸಬೇಕು. ಅಗತ್ಯ ವಸ್ತುಗಳಿಗಾಗಿ ಮಾತ್ರ ಜನತೆ ಮನೆಯಿಂದ ಹೊರಬೇಕು. ಅನಗತ್ಯ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಬೇಕೆಂದು ಮತ್ತೊಮ್ಮೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ ಮಾಡಿದರು.
Related Articles
Advertisement
ಸಾರ್ವಜನಿಕರು ಸಾಮಾಜಿಕ ಜಾಲತಾಣದ ಸುದ್ದಿ ಅಥವಾ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು. ಜಿಲ್ಲಾಡಳಿತ ನೀಡುವ ಅಧಿಕೃತ ಮಾಹಿತಿಯನ್ನು ಮಾತ್ರ ನಂಬಬೇಕು ಎಂದು ಮನವಿ ಮಾಡಿದರು.
ಇನ್ನು, ಈಗಾಗಲೇ ಜಿಲ್ಲೆಯಲ್ಲಿ ಹೆಚ್ಚು ಜನರು ಸೇರದಂತೆ ನೀಡಿಕೊಳ್ಳಲು ಕೆಲ ಸರ್ಕಾರಿ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಉಪನೋಂದಣಾಧಿಕಾರಿ ಕಚೇರಿ, ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಕಂದಾಯ ಇಲಾಖೆಯಲ್ಲಿ ಪಹಣಿ, ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡ್ ನೀಡುವ ಸೇವೆಗಳನ್ನು ರದ್ದು ಮಾಡಲಾಗಿದೆ. ಕಲಬುರಗಿಗೆ ಬೇರೆ ಜಿಲ್ಲೆಯ ಜನರು ಬರುವುದನ್ನು ತಪ್ಪಿಸಲು ಸಾರಿಗೆ ಸಂಸ್ಥೆಯ ಬಸ್ ಗಳ ಸಂಚಾರವನ್ನು ಕಡಿತಗೊಳಿಸಲಾಗಿದೆ.
ರವಿವಾರದಿಂದ ಜಿಲ್ಲಾದ್ಯಂತ ಎಲ್ಲ ರೀತಿಯ ಸಂತೆ, ಜಾತ್ರೆ ಮತ್ತು ಉರುಸುಗಳನ್ನು ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಅಲ್ಲದೇ, ಎಲ್ಲ ತರಹದ ಮದ್ಯ ಮಾರಾಟ ಹಾಗೂ ಬಾರ್, ಮತ್ತು ರೆಸ್ಟೋರೆಂಟ್ ಗಳಿಗೂ ನಿಷೇಧ ಹೇರಲಾಗಿದೆ.