Advertisement

ದೇಶದಲ್ಲಿ ಮೊದಲ ಸ್ಥಾನ; ಮಹಾರಾಷ್ಟ್ರದಲ್ಲಿ ಕೊರೊನಾ ರೋಗಿಗಳ ಸಂಖ್ಯೆ 38ಕ್ಕೆ ಏರಿಕೆ

12:18 AM Mar 21, 2020 | Nagendra Trasi |

ಮುಂಬೈ:ವಾಣಿಜ್ಯ ನಗರಿ ಮುಂಬೈಯಲ್ಲಿ ಕೊರೊನಾ ವೈರಸ್ ರೋಗಿಗಳ ಸಂಖ್ಯೆ 38ಕ್ಕೆ ಏರಿದ್ದು, ದೇಶದಲ್ಲಿ ಅತೀ ಹೆಚ್ಚು ಕೊರೊನಾ ರೋಗಿಗಳು ಇರುವ ರಾಜ್ಯದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನಕ್ಕೇರಿದೆ. ಇದರೊಂದಿಗೆ ಭಾರತದಲ್ಲಿ ಕೊರೊನಾ ರೋಗಿಗಳ ಒಟ್ಟು ಸಂಖ್ಯೆ 116ಕ್ಕೆ ಏರಿದಂತಾಗಿದೆ.

Advertisement

ಮಹಾರಾಷ್ಟ್ರದಲ್ಲಿ 38 ಪ್ರಕರಣ, ಕೇರಳದಲ್ಲಿ 22 ರೋಗಿಗಳು ಪತ್ತೆಯಾಗಿರುವುದಾಗಿ ಗೃಹ ಸಚಿವಾಲಯದ ವರದಿ ತಿಳಿಸಿದೆ. ಮಾರ್ಚ್ 15ರವರೆಗೆ ವಿಮಾನ ನಿಲ್ದಾಣಗಳಲ್ಲಿ 12,76,046 ಪ್ರಯಾಣಿಕರ ತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದೆ.

ದುಬೈನಿಂದ ಆಗಮಿಸಿದ್ದ ವ್ಯಕ್ತಿಯನ್ನು ತಪಾಸಣೆಗೊಳಪಡಿಸಿದಾಗ ಪಾಸಿಟಿವ್ ವರದಿ ಬಂದಿದ್ದು, ಇದರೊಂದಿಗೆ ಮಹಾರಾಷ್ಟ್ರದಲ್ಲಿ ಕೊರೊನಾ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾದಂತಾಗಿದೆ ಎಂದು ವರದಿ ವಿವರಿಸಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮತ್ತು ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು ಜಿಲ್ಲಾ ಮ್ಯಾಜಿಸ್ಟ್ರೇಟ್ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next