Advertisement

ಕರ್ನಾಟಕದಲ್ಲಿ ಕೊರೊನಾ ಸೋಂಕು ಪತ್ತೆ ಪ್ರಕರಣ: ಮುಂದುವರೆದ ತಪಾಸಣೆ

09:47 AM Mar 10, 2020 | sudhir |

ಬೆಂಗಳೂರು: ವಿದೇಶದಿಂದ ರಾಜ್ಯಕ್ಕೆ ಆಗಮಿಸುತ್ತಿರುವವರ ಕೊರೊನಾ ಸೋಂಕು ಪತ್ತೆ ತಪಾಸಣೆಯು ಮುಂದುವರೆದಿದೆ.

Advertisement

ಜನವರಿ 21 ರಿಂದ ಸೋಮವಾರದವರೆಗೆ ವಿದೇಶಕ್ಕೆ ತೆರಳಿ ಬಂದ 982 ಮಂದಿಯನ್ನು ಮನೆಗಳಲ್ಲಿ ನಿಗಾ ಇರಿಸಲಾಗಿದೆ. ಈ ಪೈಕಿ 266 ಮಂದಿಯ 28 ದಿನಗಳ ನಿಗಾ ಅವಧಿ ಮುಕ್ತಾಯವಾಗಿದೆ. 432 ಮಂದಿಯ ಗಂಟಲು ದ್ರಾವಣ ಮಾದರಿಯನ್ನು ಪರೀಕ್ಷೆ ಮಾಡಿದ್ದು, 364 ಮಂದಿ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. 68 ಮಂದಿಯ ಫಲಿತಾಂಶ ಲಭ್ಯವಾಗಬೇಕಿದೆ.

ರಾಜ್ಯದಲ್ಲಿ ಸೋಮವಾರ 12 ಮಂದಿ ವಿವಿಧ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಂಗಳೂರಿನಲ್ಲಿ 8, ಮಂಗಳೂರಿನಲ್ಲಿ 2, ಬಾಗಲಕೋಟೆ ಮತ್ತು ಹಾಸನದಲ್ಲಿ ತಲಾ ಒಬ್ಬರನ್ನು ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಿಸಿಕೊಂಡು ಪ್ರತ್ಯೇಕವಾಗಿ ಇರಿಸಲಾಗಿದೆ.

ಇಲ್ಲಿಯವರೆಗೂ ಒಟ್ಟು 91,911 ಮಂದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಪರೀಕ್ಷೆ ಮಾಡಲಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ 61,585 ಮಂದಿ, ಮಂಗಳೂರಿನಲ್ಲಿ 25,003 ಮಂದಿಯನ್ನು ಸ್ಕ್ರೀನಿಂಗ್ ಪರೀಕ್ಷೆಗೆ ಒಳಪಡಿಸಲಾಗಿದೆ. ಕಾರವಾರ ಮತ್ತು ಮಂಗಳೂರು ಬಂದರಿನಲ್ಲಿ ಒಟ್ಟು 5,323 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next