Advertisement

ದೇಶದಲ್ಲಿ ಕೋವಿಡ್ ಏರಿಕೆ : ಸತತ ಮೂರನೇ ದಿನವೂ 40,000 ದಾಟಿದ ಪ್ರಕರಣಗಳು

10:58 AM Aug 06, 2021 | Team Udayavani |

ನವದೆಹಲಿ: ದೇಶದಲ್ಲಿ ಕೋವಿಡ್ ಮಹಾಮಾರಿಯ ಆತಂಕ ದಿನೇ ದಿನೇ ಏರಿಕೆಯಾಗುತ್ತಿದೆ. ಕಳೆದ ದಿನಕ್ಕೆ ಅಂದ್ರೆ ಗುರುವಾರಕ್ಕೆ ಹೋಲಿಕೆ ಮಾಡಿದ್ರೆ ಇಂದು(ಶುಕ್ರವಾರ) ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಸ್ವಲ್ಪ ಮಟ್ಟಿನ ಏರಿಕೆಯಾಗಿದೆ.

Advertisement

ಶುಕ್ರವಾರ 24 ಗಂಟೆಗಳ ಅವಧಿಯಲ್ಲಿ 44,643 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಸುಮಾರು 2,000 ಪ್ರಕರಣಗಳು ಏರಿಕೆಯಾದಂತಾಗಿದೆ. ಇದರಿಂದಾಗಿ ಕಳೆದ ಮೂರು ದಿನಗಳಲ್ಲಿ 40,000ಕ್ಕೂ ಅಧಿಕ ಹೊಸ ಪ್ರಕರಣಗಳು ದಾಖಲಾಗಿವೆ.

ಸದ್ಯ ದೇಶದಲ್ಲಿ 4,14,159 ಸಕ್ರಿಯ ಪ್ರಕರಣಗಳಿವೆ. 24 ಗಂಟೆಗಳಲ್ಲಿ 41,096 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.  ಇನ್ನು 464 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 3.18 ಕೋಟಿಯನ್ನು ದಾಟಿದೆ. ಇದರಲ್ಲಿ 3.10 ಕೋಟಿಗೂ ಹೆಚ್ಚು ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಹಾಗೂ 4,26,754 ಜನ ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next