Advertisement

ಕೊರೊನಾಕ್ಕೆ ಲಸಿಕೆಯೇ ಮದ್ದು : ಪ್ರಿಯಾಂಕ್‌

05:12 PM Jul 03, 2021 | Team Udayavani |

ಚಿತ್ತಾಪುರ: ಕೊರೊನಾ ಸೋಂಕು ತಡೆಯಲು ಲಸಿಕೆಯೇ ಮದ್ದು ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದರು. ಪಟ್ಟಣದ ಆರ್‌.ಕೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ಲಸಿಕೆ ಹಾಕಿಸಿಕೊಂಡು ಅವರು ಮಾತನಾಡಿದರು.

Advertisement

18 ವರ್ಷ ದಾಟಿದ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೋವಿಡ್‌ ನಿಯಂತ್ರಣಕ್ಕೆ ಇಲಾಖೆಗಳು ನಡೆಸು ತ್ತಿರುವ ಪ್ರಯತ್ನಕ್ಕೆ ಸಹಕಾರ ನೀಡಬೇಕು. ಚಿತ್ತಾಪುರ, ವಾಡಿಯಲ್ಲಿ ಮುಂದಿನ ಲಸಿಕಾ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಎರಡು ಸಾವಿರ ಜನರಿಗೆ ಹಾಕಿಸುವ ಗುರಿ ಹೊಂದಲಾಗಿದೆ ಎಂದರು.

ತಾಲೂಕು ವೈದ್ಯಾ ಧಿಕಾರಿ ಡಾ| ದೀಪಕ ಪಾಟೀಲ ಮಾತನಾಡಿ, ಅಭಿಯಾನ ಕಾರ್ಯಕ್ರಮದಲ್ಲಿ ಒಂದು ಸಾವಿರ ಜನಕ್ಕೆ ಲಸಿಕೆ ಹಾಕಿಸುವ ಗುರಿ ಹೊಂದಿದ್ದು, 348 ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದರು. ಲಸಿಕೆ ಅಭಿಯಾನ ಕೇಂದ್ರಕ್ಕೆ ಬರಲು ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ಆಟೋ ವ್ಯವಸ್ಥೆ ಮಾಡಲಾಗಿತ್ತು.

ವಿಧಾನ ಪರಿಷತ್‌ ಮಾಜಿ ಸದಸ್ಯ ತಿಪ್ಪಣಪ್ಪ ಕಮಕನೂರು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ ಗುತ್ತೇದಾರ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ, ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಅಫಜಲ್‌ಪುರಕರ್‌, ಪ್ರಮುಖರಾದ ಶಿವಾನಂದ ಪಾಟೀಲ, ರಮೇಶ ಮರಗೋಳ, ಶಿವರುದ್ರ ಭೀಣಿ, ವೀರಣ್ಣಗೌಡ ಪರಸರೆಡ್ಡಿ, ಮುಕ್ತಾರ ಪಟೇಲ್‌, ಶ್ರೀನಿವಾಸ ಸಗರ, ಶೀಲಾ ಕಾಶಿ, ತಹಶೀಲ್ದಾರ ಉಮಾಕಾಂತ ಹಳ್ಳೆ, ತಾಪಂ ಇಒ ನೀಲಗಂಗಾ ಬಬಲಾದ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next