ಮದ್ದೂರು: ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳಿಗೆ ಅನಗತ್ಯ ವಿಳಂಬ, ನಿರ್ಲಕ್ಷ್ಯ ತೋರಿದಲ್ಲಿ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳಿಗೆ ದೂರು ನೀಡಬಹುದೆಂದು ದಕ್ಷಿಣ ವಲಯ ಎಸಿಬಿ ಪೊಲೀಸ್ ವರಿಷ್ಠಾಧಿಕಾರಿ ರಶ್ಮಿ ತಿಳಿಸಿದರು.
ಲಂಚ ಆರೋಪ: ಕೆಲ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ ಕ್ರಮ ಕೈಗೊಳ್ಳುವ ಜತೆಗೆ ಅಧಿಕಾರಿಗಳು ಸರ್ಕಾರಿ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ವಿತರಿಸುವ ಜತೆಗೆ ಯಾವುದೇ ಅಕ್ರಮ ವೆಸಗದಂತೆ ಸೂಚಿಸಿದರು.
ಕಳೆದ ಸಾಲಿನಲ್ಲಿ 153 ಹಾಗೂ ಪ್ರಸಕ್ತ ಸಾಲಿನಲ್ಲಿ 50 ದೂರು ಸಾರ್ವಜನಿಕರಿಂದ ಬಂದಿದ್ದು, ಈ ಪೈಕಿ 195 ಪ್ರಕರಣಗಳನ್ನು ಇತ್ಯರ್ಥ ಪಡಿಸಿದ್ದೇವೆ. ಬಾಕಿ ಉಳಿದಿರುವ 8 ಪ್ರಕರಣಗಳ ಸಂಬಂದ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.
ಗೋಮಾಳ ಒತ್ತುವರಿ: ತಾಲೂಕಿನ ಮೆಣ ಸಗೆರೆ ಜಯರಾಮು ಸರ್ಕಾರಿ ಗೋಮಾಳ ವನ್ನು ಅಕ್ರಮವಾಗಿ ಒತ್ತುವರಿ ಮಾಡಿ ಕೊಂಡಿದ್ದು ತಹಶೀಲ್ದಾರ್‌ರಿಗೆ ಹಲ ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆಂದು ದೂರು ನೀಡಿದರು.
Advertisement
ಪಟ್ಟಣದಲ್ಲಿ ಭ್ರಷ್ಟಾಚಾರ ನಿಗ್ರಹದಳ ಅಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆಗಳ ದೂರು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ರೈತರು ಹಾಗೂ ಸಾರ್ವಜ ನಿಕರಿಂದ ಲಂಚ ಕೇಳಿದಲ್ಲಿ ಎಸಿಬಿಗೆ ದೂರು ನೀಡಬಹುದು. ಅಧಿಕಾರಿಗಳು ಸಮರ್ಪಕ ವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಇಲಾಖೆಗಳಲ್ಲಿ ಯಾವುದೇ ಭ್ರಷ್ಟಾಚಾರ ನಡೆಯದಂತೆ ಅಗತ್ಯ ಕ್ರಮ ವಹಿಸಬೇಕೆಂದರು.
Related Articles
Advertisement
ಅರ್ಜಿ ಸ್ವೀಕರಿಸಿದ ಎಸಿಬಿ ಅಧಿಕಾರಿ ರಶ್ಮಿ, ಅರ್ಜಿ ಪರಿಶೀಲಿಸಿ ಕೂಡಲೇ ಒತ್ತುವರಿ ಜಾಗ ತೆರವುಗೊಳಿಸಿ ಜನ ಜಾನುವಾರುಗಳು, ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮ ವಹಿಸುವಂತೆ ಕಂದಾಯ ಅಧಿಕಾರಿಗೆ ಸೂಚಿಸಿದರು.
ತ್ಯಾಜ್ಯ ನೀರು ರಸ್ತೆಗೆ: ಮದ್ದೂರು ಪುರಸಭೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಯುಜಿಡಿ ಸಂಪರ್ಕದ ತ್ಯಾಜ್ಯ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೆ ಅನಾನುಕೂಲವಾಗಿದೆ. ಪುರಸಭೆ ಅಧಿಕಾರಿಗಳಿಗೆ 9 ತಿಂಗಳಿಂದಲೂ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯ ನಿವಾಸಿ ನಾರಾಯಣ್ ದೂರು ನೀಡಿದರು. ಆರೋಗ್ಯಾಧಿಕಾರಿ ಶಿವಕುಮಾರ್‌ರನ್ನು ತರಾಟೆಗೆ ತೆಗೆದುಕೊಂಡ ಎಸಿಬಿ ಡಿವೈಎಸ್‌ಪಿ ಮಂಜುನಾಥ್, 9 ತಿಂಗಳಿಂದಲೂ ಯುಜಿಡಿ ಸಂಪರ್ಕ ದುರಸ್ತಿ ಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದೇಕೆ? ಒಂದು ವಾರದೊಳಗಾಗಿ ಅಗತ್ಯ ಕ್ರಮ ವಹಿಸದಿದ್ದಲ್ಲಿ ಮೇಲಧಿಕಾರಿಗಳಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪುರಸಭಾ ಅಧಿಕಾರಿಗಳಿಗೆ ಎಚ್ಚರಿಸಿದರು.
ಅಕ್ರಮ ಖಾತೆ: ಮದ್ದೂರು ನಿವಾಸಿ ಯೊಬ್ಬರಿಗೆ ಪುರಸಭೆ ಮುಖ್ಯಾಧಿಕಾರಿ ಮಹೇಶ್ ನಿವೇಶನಕ್ಕೆ ಅಕ್ರಮ ಖಾತೆ ಮಾಡಿ ಕೊಟ್ಟಿದ್ದು ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಪುರಸಭೆ ಸದಸ್ಯೆ ಪ್ರಿಯಾಂಕ ಅಪ್ಪುಗೌಡ ದೂರು ನೀಡಿದರು.
ಅಕ್ರಮ ಖಾತೆ ಮಾಡಿಕೊಟ್ಟಿರುವ ಬಗ್ಗೆ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆ ದಿದ್ದು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಾಧಿಕಾರಿ ಮಹೇಶ್ ಬೇರೆಡೆಗೆ ವರ್ಗಾ ವಣೆಗೊಂಡಿದ್ದಾರೆ. ಈಗಾಗಲೇ ಈ ಸಂಬಂಧ ಮಾಹಿತಿ ಪಡೆಯುತ್ತಿರುವುದಾಗಿ ತಿಳಿಸಿದರು.
ಎಸಿಬಿ ಡಿವೈಎಸ್‌ಪಿ ಮಂಜುನಾಥ, ವೃತ್ತ ನಿರೀಕ್ಷಕ ಪ್ರದೀಪ್ ಇತರರಿದ್ದರು.